ಮೂರ್ನಾಡು ಅ.28 NEWS DESK : ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 16ನೇ ವರ್ಷದ ಓಣಂ ಆಚರಣೆಯು ಸಂಭ್ರಮದಿಂದ ನಡೆಯಿತು. ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ಓಣಂ ಆಚರಣೆಯ ಸಮಾರಂಭವನ್ನು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿ ಮಾತನಾಡಿ, ನಮ್ಮ ಆಚಾರ-ವಿಚಾರ, ಸಂಸ್ಕೃತಿಯನ್ನು ಉಳಿಸಿಬೆಳೆಸಬೇಕು. ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು. ಆಗಷ್ಟೆ ದೇಶ ದೇಶವಾಗಿ ಉಳಿಯಲು ಸಾಧ್ಯ ಎಂದರು. ಇಡೀ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ಸಂಘಟನೆಗಳಿಂದ ಆಗುತ್ತಿದೆ. ಸಮಾಜ ಒಳ್ಳೆಯದಾದರೆ ನಾಡು ಸುಭದ್ರವಾಗುತ್ತದೆ. ಆ ಮೂಲಕ ದೇಶದ ಏಕತೆ ಅಖಂಡತೆಗೆ ಕಾರಣವಾಗುತ್ತದೆ ಎಂದು ಹೇಳಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ನ್ಮಾತನಾಡಿ ಮಾತನಾಡಿ, ಹಿಂದೂ ಸಮಾಜದವರು ತಮ್ಮ ಸಂಸ್ಕೃತಿಗಳನ್ನು ಚಾಚೂತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜಗಟ್ಟಿಗೊಳ್ಳುತ್ತದೆ. ತಮ್ಮ ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊಂಡಾಗ ದೇಶವುಸಹ ಅಭಿವೃದ್ಧಿ ಹೊಂದುತ್ತದೆ. ಸಮಾಜವನ್ನು ಕಟ್ಟುವುದರೊಂದಿಗೆ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಒಗ್ಗಟ್ಟನ್ನು ಪ್ರದರ್ಶಿಸಿ ಆರ್ಥಿಕವಾಗಿ ಸಬಲರಾಗುವಂತೆ ಪ್ರಯತ್ನ ಶೀಲರಾಗಬೇಕು ಎಂದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ಕೆ.ಶಶಿಕುಮಾರ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮುಖ್ಯಕಾರ್ಯದರ್ಶಿ ಎನ್.ವಿ.ಉನ್ನಿಕೃಷ್ಣ, ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಡ್ವೈಜರಿಕಮಿಟಿಚೇರ್ಮನ್ವಾಸುದೇವನ್, ವಿರಾಜಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ವಿನುತ್, ಒಂಟಿಯಂಗಡಿ ಹಿಂದೂಮಲಯಾಳಿ ಸಂಘದ ಅಧ್ಯಕ್ಷ ನಂದಕುಮಾರ್, ನಾಪೆÇೀಕ್ಲು ಹಿಂದೂಮಲಯಾಳಿ ಸಂಘದ ಅಧ್ಯಕ್ಷ ಅನಿಲ್, ಸೋಮವಾರಪೇಟೆ ಹಿಂದೂಮಲಯಾಳಿ ಸಂಘದ ಅಧ್ಯಕ್ಷ ಪ್ರಕಾಶ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ.ರವೀಂದ್ರನ್, ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ, ಹಿಂದೂಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ.ಸುಧೀರ್, ಮೂರ್ನಾಡು ಹಿಂದೂಮಲಯಾಳಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಸಂತೋಷ್ ಕುಮಾರ್, ಉಪಾಧ್ಯಕ್ಷ ಕೆ.ಎ.ಸುಬ್ರಮಣಿ, ಖಜಾಂಚಿ ಎನ್.ಕೆ.ಮುರಳಿ ಹಾಜರಿದ್ದರು. ಮೂರ್ನಾಡು ಹಿಂದೂಮಲಯಾಳಿ ಸಂಘದ ಅಧ್ಯಕ್ಷ ಕೆ.ಬಾಬು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಬಲಮುರಿಯಲ್ಲಿ ಇತ್ತೀಚಿಗೆ ನದಿಗೆ ಬಿದ್ದ ವ್ಯಕ್ತಿಯನ್ನು ಸಂರಕ್ಷಿಸಿದ ಈಜುಗಾರ ಹಾಗೂ ಸಂಘದ ಸದಸ್ಯಎಂ.ಆರ್.ಬಿಪಿನ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ಮೂರ್ನಾಡಿನ ಕಿಶೋರ್ ಪ್ರಥಮ ಸ್ಥಾನಗಳಿಸಿದರು. ದ್ವಿತೀಯ ಸ್ಥಾನವನ್ನು ಕಬಡಕೇರಿಯ ಜಿತಿನ್ ಹಾಗೂ ತೃತೀಯ ಬಹುಮಾನವನ್ನು ಪಾಲೆಮಾಡಿನ ಸುನೀತ ರಾಜನ್ ಪಡೆದುಕೊಂಡರು. ವಿಜೇತರಿಗೆ ನಗದುಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು. ಸಮಾರಂಭಕ್ಕೂ ಮುಂಚೆ ಮೂರ್ನಾಡಿನ ಮುಖ್ಯಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೇರಳದ ಸಾಂಪ್ರಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚೆಂಡೆಮೇಳದವರು, ಮಾವೇಲಿ ಪಾತ್ರಧಾರಿಗಳು, ಶ್ರೀಕೃಷ್ಣ ವೇಷಧಾರಿಗಳು ಪಾಲ್ಗೊಂಡು ನೋಡುಗರ ಗಮನ ಸೆಳೆದರು. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿದರು. ಓಣಂ ಭೋಜನದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸಿಮ್ಲಾಗೋಪಿ, ಸುಜಾತ ಗೋಪಿ ಪ್ರಾರ್ಥಿಸಿದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ.ಸುಧಿ ಸ್ವಾಗತಿಸಿದರು, ಸಂಜೀವ ಕಾರ್ಯಕ್ರಮ ನಿರೂಪಿಸಿ, ಟಿ. ಸಂತೋಷ್ ಕುಮಾರ್ ವಂದಿಸಿದರು.
ವರದಿ : ಟಿ.ಸಿ.ನಾಗರಾಜ್, ಮೂರ್ನಾಡು