ಪುತ್ತೂರು NEWS DESK ಅ.28 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಅIಖಿ ಗುಬ್ಬಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ಅಕ್ಟೋಬರ್ 30 ರಿಂದ ಚೆನ್ನೈನ ಎಸ್ಆರ್ಎಮ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಸತತ ಮೂರನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
Breaking News
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*