ಮಡಿಕೇರಿ ಅ.29 NEWS DESK : ಪ್ರಸಕ್ತ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಎಲ್ಲಾ ವರ್ಗದವರು ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ನಿರುದ್ಯೋಗ ಯುವಕ, ಯುವತಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸ್ವ-ಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ/ನಗರ/ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50 ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಕಾಫಿ ಗ್ರೈಂಡಿಂಗ್, ಫ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನುಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರಸ್, ಬ್ಯೂಟಿ ಪಾರ್ಲರ್, ಸಲೂನ್, ಘಿ-ಖಚಿಥಿ sಛಿಚಿಟಿಟಿiಟಿg, ಒeಜiಛಿಚಿಟ ಟಚಿb, ಅಡಿಕೆ ಮತ್ತು ಪೇಪರ್ ಪ್ಲೇಟ್ಸ್, ಶಾಮಿಯಾನ, ಸೆಂಟ್ರಿಂಗ್ ವಕ್ರ್ಸ್, ಎಂಜಿನಿಯರಿಂಗ್ ವಕ್ರ್ಸ್, ವೆಲ್ಡಿಂಗ್, ವಾಟರ್ ಸರ್ವೀಸ್ ಸ್ಟೇಷನ್, ಹಸು/ಕುರಿ/ಮೇಕೆ/ಎಮ್ಮೆ/ಕೋಳಿ/ಬಾತು ಕೋಳಿ/ಮೀನು ಸಾಕಾಣಿಕೆ ಹಾಗೂ ಸಸ್ಯಹಾರಿ ಮತ್ತು ಮಾಂಸಹಾರಿ ಹೋಟೆಲ್ ಮತ್ತು ಇತರೆ 630 ಕ್ಕೂ ಅಧಿಕ ಉದ್ದಿಮೆಗಳಿಗೆ ಸಾಲ ಸಹಾಯಧನ ನೀಡಲಾಗುವುದು. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ www.kvic.org.in (pmegp online application)ನಲ್ಲಿ ಅರ್ಜಿ ಸಲ್ಲಿಸುವಾಗ ಏಜೆನ್ಸಿ ಕೆವಿಐಬಿ ಎಂದು ಅರ್ಜಿಯಲ್ಲಿ ಅಳವಡಿಸಿ ಅದರ ಪ್ರತಿಯೊಂದಿಗೆ 3 ಸೆಟ್‍ನಲ್ಲಿ ದಾಖಲಾತಿಗಳೊಂದಿಗೆ ಈ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಹೆಚ್.ಆರ್.ಸುಧಾಮ, ಜಿಲ್ಲಾ ಖಾದಿ ಗ್ರಾಮೊದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 08272-225946, 9480825630.