Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ : ವೇಳಾಪಟ್ಟಿ ಪ್ರಕಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ : ವೇಳಾಪಟ್ಟಿ ಪ್ರಕಟ*

ಅಕ್ಟೋಬರ್ 29, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.29 NEWS DESK : ಭಾರತ ಚುನಾವಣಾ ಆಯೋಗವು ಪ್ರತೀ ವರ್ಷ ಜ.1 ನ್ನು ಅರ್ಹತಾ ದಿನಾಂಕವಾಗಿ ನಿಗಧಿಪಡಿಸಿಕೊಂಡು ‘ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ’ವನ್ನು ಕೈಗೊಳ್ಳಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅ.29 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನ.28 ರವರೆಗೆ ಸರಿಪಡಿಸಿಕೊಳ್ಳಲು/ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ನ.9, 10, 23 ಮತ್ತು 24 ರಂದು ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ವಿಶೇಷ ಅಭಿಯಾನ ನಡೆಯಲಿದೆ. ಡಿ.24 ರಂದು ಮನವಿ/ ಆಕ್ಷೇಪಣೆಗಳ ಸರಿಪಡಿಸುವ ಕಾರ್ಯ ನಡೆಯಲಿದೆ. 2025 ರ ಜನವರಿ, 1 ರಂದು ಅಂತಿಮ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ನಡೆಯಲಿದೆ. 2025 ಜನವರಿ, 6 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಈ ಸಂಬಂಧ ತಮ್ಮ ತಮ್ಮ ಹಂತದಲ್ಲಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದರು. ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 02 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳು ಒಟ್ಟು 6 ಮತಗಟ್ಟೆಗಳು ಹೆಚ್ಚಳವಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಗದ್ದೆಹಳ್ಳ, ಗುಮ್ಮನಕೊಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಡಗ ಬಾನಂಗಾಲ(ಹುಂಡಿ), ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಶಾಲಪ್ಪ ಮೆಮೋರಿಯಲ್ ಬಳಿಯ ಶಿಶು ವಿಹಾರ ಕೇಂದ್ರ, ಗೋಣಿಕೊಪ್ಪ ರಸ್ತೆ ಹಾಗೂ ಪಂಜರಪೇಟೆಯ ಉರ್ದುಶಾಲೆ ಇಲ್ಲಿ ಹೊಸ ಮತಗಟ್ಟೆಗಳು ಸ್ಥಾಪನೆ ಆಗಿದೆ ಎಂದು ಆರ್.ಐಶ್ವರ್ಯ ಅವರು ತಿಳಿಸಿದರು. ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ, ತಾಲ್ಲೂಕು ಕಚೇರಿಗಳಲ್ಲಿ, ಉಪ ವಿಭಾಗಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಸಾರ್ವಜನಿಕರ ಅವಗಾಹನೆಗಾಗಿ ಅಕ್ಟೋಬರ್, 29 ರಂದು ಪ್ರಕಟಣೆ ಮಾಡಲಾಗಿದ್ದು, ಸಾರ್ವಜನಿಕರು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಎಂದರು. ಕರಡು ಮತದಾರರ ಪಟ್ಟಿಯನ್ನು https://ceo.karnataka.gov.in ಮತ್ತು https://kodagu.nic.in website ನಲ್ಲಿಯೂ ಸಹ ಪರಿಶೀಲಿಸುವ ಮೂಲಕ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. 2024 ರ ಅಕ್ಟೋಬರ್, 29 ರಂದು ಪ್ರಕಟಣೆ ಮಾಡಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 552 ಮತಗಟ್ಟೆಗಳಲ್ಲಿ 4,74,097 ಮತದಾರರು ಇದ್ದಾರೆ. ಇದರಲ್ಲಿ 2,32,041 ಪುರುಷರು, 2,42,041 ಮಹಿಳಾ ಮತದಾರರು ಹಾಗೂ 15 ಇತರ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು. ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 275 ಮತಗಟ್ಟೆಯಲ್ಲಿ 2,40,247 ಮತದಾರರು ಇದ್ದು, ಇದರಲ್ಲಿ 1,16,787 ಪುರುಷ ಮತದಾರರು, 1,23,452 ಮಹಿಳಾ ಮತದಾರರು ಮತ್ತು 8 ಇತರ ಮತದಾರರು ಇದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 277 ಮತಗಟ್ಟೆಗಳಿದ್ದು, 2,33,850 ಮತದಾರರು ಇದ್ದಾರೆ. ಇದರಲ್ಲಿ 1,15,254 ಪುರುಷ ಮತದಾರರು, 1,18,589 ಮಹಿಳಾ ಮತದಾರರು, 7 ಮಂದಿ ಇತರೆ ಮತದಾರರು ಇದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ‘ಕರಡು ಮತದಾರರ ಪಟ್ಟಿಯ ಪ್ರಕಟಣೆ ದಿನದಿಂದ ಅಂದರೆ ಅಕ್ಟೋಬರ್, 29 ರಿಂದ ನವೆಂಬರ್, 28 ರವರೆಗೆ 2025 ರ ಜನವರಿ, 01, 2025 ರ ಏಪ್ರಿಲ್, 01, 2025 ರ ಜುಲೈ, 01 ಮತ್ತು 2025 ರ ಅಕ್ಟೋಬರ್, 01 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದರು.’ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಆಕ್ಷೇಪಣೆ ಅರ್ಜಿಯನ್ನು ವೇಳಾಪಟ್ಟಿ ದಿನಾಂಕದಲ್ಲಿ ಪಡೆದುಕೊಳ್ಳಲಾಗುತ್ತದೆ ಎಂದರು. ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಆರ್.ಐಶ್ವರ್ಯ ಅವರು ವಿವರಿಸಿದರು. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನಮೂನೆ-6, 6ಎ, 7 ಮತ್ತು 8ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಅನ್‍ಲೈನ್‍ನಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ನವೆಂಬರ್, 9, 10, 23 ಮತ್ತು 24 ರಂದು ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದ್ದು, ನಾಗರಿಕರು ಇದರ ಉಪಯೋಗವನ್ನು ಪಡೆದುಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬಹುದು. ನೋಂದಣಿ ಆಗದೆ ಇದ್ದಲ್ಲಿ ನಮೂನೆ-6 ರಲ್ಲಿ ಅರ್ಜಿಯನ್ನು ಸ್ಥಳದಲ್ಲಿಯೇ ನೀಡಬಹುದಾಗಿದೆ ಎಂದರು.
ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ (VOTER HELPLINE APP) ಅನ್ನು ಅಭಿವೃದ್ಧಿಪಡಿಸಿದ್ದು. ಎಲ್ಲಾ ಮತದಾರರು / ನಾಗರಿಕರು ತಮ್ಮ ಮೊಬೈಲ್‍ನಲ್ಲಿ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಅನ್ನು ಡೌನ್‍ಲೋಡ್ ಮಾಡಿಕೊಳ್ಳುವುದು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 1500 ಕ್ಕಿಂತ ಹೆಚ್ಚು ಮತದಾರರು ಇರುವ ಕೊಡಗು ಜಿಲ್ಲೆಯ ಎರಡು ವಿಧಾನ ಸಭಾ ಕ್ಷೇತ್ರಗಳಿಂದ ಒಟ್ಟು 06 ಮತಗಟ್ಟೆಗಳನ್ನು ಪುನರ್ ವಿಂಗಡಣೆ (Rationalization of Polling Stations) ಮಾಡಿ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಭಾರತ ಚುನಾವಣಾ ಆಯೋಗವು ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ಆರ್.ಐಶ್ವರ್ಯ ಅವರು ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರತಿನಿಧಿ ತೆನ್ನಿರಾ ಮೈನಾ ಅವರು ಮಾತನಾಡಿ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಪ್ರತೀ ಬೂತ್‍ಗಳಿಗೆ ಬಿಎಲ್‍ಎ(ಬೂತ್ ಮಟ್ಟದ ಏಜೆಂಟ್) ಗಳನ್ನು ನಿಯೋಜಿಸಲಾಗಿದ್ದು, ಅವರನ್ನು ಬೂತ್ ಮಟ್ಟದ ಅಧಿಕಾರಿಗಳ ಜೊತೆ ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು. ಭಾರತೀಯ ಜನತಾ ಪಕ್ಷದ ಪ್ರಮುಖರಾದ ಸಜಿಲ್ ಕೃಷ್ಣ, ಬಹುಜನ ಸಮಾಜ ಪಕ್ಷದ ಕವಿತಾ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಹಲವು ಮಾಹಿತಿ ನೀಡಿದರು. ಚುನಾವಣಾ ಶಿರಸ್ತೇದಾರ್ ಕೆ.ಜಿ.ಮಧುಕರ, ಅನಿಲ್ ಕುಮಾರ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಮೇ 8 : ಮುಂಬರುವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ಸಂಭವನೀಯ ಭೂಕುಸಿತ, ನದಿ ಪ್ರವಾಹದಂತಹ ವಿಕೋಪದ…

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.