ಮಡಿಕೇರಿ NEWS DESK ಅ.29 : ಮುಂದಿನ ವರ್ಷ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ 25ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಕಪ್ ಹಾಕಿ ಹಬ್ಬಕ್ಕೆ ಮುದ್ದಂಡ ಕುಟುಂಬಸ್ಥರು ಪೂರ್ವಭಾವಿ ತಯಾರಿಯಲ್ಲಿ ತೊಡಗಿದ್ದಾರೆ. ಜನಪ್ರತಿನಿಧಿಗಳನ್ನು ಭೇಟಿಯಾದ ಕುಟುಂಬದ ಪ್ರಮುಖರು ಹಾಕಿ ಉತ್ಸವದ ಯಶಸ್ಸಿಗಾಗಿ ಸಹಕಾರ ಕೋರಿದರು.
ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯ0ಡ ವೀಣಾ ಅಚ್ಚಯ್ಯ ಅವರುಗಳನ್ನು ಭೇಟಿಯಾದ ಮುದ್ದಂಡ ಕುಟುಂಬಸ್ಥರ ನಿಯೋಗ 2025 ರ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು. ಮುದ್ದಂಡ ಕುಟುಂಬದ ಅಧ್ಯಕ್ಷ ಮುದ್ದಂಡ ಡಾಲಿ ತಿಮ್ಮಯ್ಯ, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಕಾರ್ಯದರ್ಶಿ ಮುದ್ದಂಡ ಆದ್ಯ ತಿಮ್ಮಯ್ಯ, ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ, ಮುದ್ದಂಡ ಅಶೋಕ್, ಜಂಟಿ ಕಾರ್ಯದರ್ಶಿ ಮುದ್ದಂಡ ರಂಜಿತ್ ಪೊನ್ನಪ್ಪ, ಮುದ್ದಂಡ ಕುಶಾಲಪ್ಪ, ಮುದ್ದಂಡ ರಾಯ್, ಮುದ್ದಂಡ ಕಿರಣ್ ಪೂಣಚ್ಚ, ಮುದ್ದಂಡ ಆದರ್ಶ್, ಮುದ್ದಂಡ ಬನ್ಸಿ ಬೋಪಣ್ಣ ಮತ್ತಿತರರು ನಿಯೋಗದಲ್ಲಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*