ಮಡಿಕೇರಿ NEWS DESK ಅ.30 : ಸಾಹಿತಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಹಾಗೂ ವಿಶ್ರಾಂತ ಕುಲಪತಿಗಳಾದ ಕೊಡಗಿನ ಮೂಲದ ಪ್ರೊ.ಪದ್ಮಾ ಶೇಖರ್ ಅವರು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಈ ಬಾರಿಯ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಶಾಲನಗರ ತಾಲ್ಲೂಕಿನ ತೊರೆನೂರಿನವರಾದ ಪ್ರ‍್ರೊ.ಪದ್ಮಾ ಶೇಖರ್ ಅವರು, ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿದ್ದಾರೆ. ಸಾಹಿತ್ಯ, ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತç ಮತ್ತು ಪ್ರಾಕೃತ ವಿಭಾಗದ ಪ್ರಾಧ್ಯಾಪಕರು ಮತ್ತು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು, ಮೈಸೂರು ವಿವಿ ಮಹಿಳಾ ಅಧ್ಯಯನದ ನಿರ್ದೇಶಕರು, ಮೈಸೂರು ವಿವಿ ಕ್ರೈಸ್ತಶಾಸ್ತ್ರ ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಶೈಕ್ಷಣಿಕ ಕಾರ್ಯಚಟುವಟಿಕೆಗಳೊಂದಿಗೆ ಇವರು ಜೀವನ ಚರಿತ್ರೆ, ವಿಮರ್ಶೆ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ತಮ್ಮನ್ನು ಗಾಢವಾಗಿ ತೊಡಗಿಸಿಕೊಂಡವರು. ಜೈನಶಾಸ್ತçದ ಕುರಿತು, ಕನ್ನಡ ಮತ್ತು ಪ್ರಾಕೃತ ಸಂಬಂಧಗಳು, ಕನ್ನಡ ಛಂದಸ್ಸುಗಳ ಬಗ್ಗೆ ಆಳವಾದ ಅಧ್ಯಯನ ನಡೆಸಿ ಸಂಶೋಧನಾ ಗ್ರಂಥಗಳನ್ನು ಹೊರ ತಂದವರಾಗಿದ್ದಾರೆ. ಇವುಗಳೊಂದಿಗೆ ‘ಹಕ್ಕಿಯ ಹರಯ’, ‘ಉರಿಯ ಚಪ್ಪರ’ ಎನ್ನುವ ಕವನ ಸಂಕಲನವನ್ನು ಹೊರ ತಂದಿರುವುದು ವಿಶೇಷ. ಈ ಹಿಂದೆ ಮಡಿಕೇರಿ ತಾಲ್ಲೂಕಿನ ಮೂರ್ನಾಡಿನಲ್ಲಿ ನಡೆದ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಪ್ರೊ.ಪದ್ಮ ಶೇಖರ್ ಅವರು ಸಂಶೋಧನೆ ಮತ್ತು ಸಾಹಿತ್ಯ ಕೃಷಿಗಾಗಿ ಹಲವು ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಪ್ರಮುಖವಾಗಿ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಗೊರೂರು ಸಾಹಿತ್ಯ ಪ್ರಶಸ್ತಿ, ಶ್ರೀ ಚೌಡಯ್ಯ ಸಾಹಿತ್ಯ ಪ್ರಶಸ್ತಿ ಒಳಗೊಂಡಂತೆ 18 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಪ್ರಸ್ತುತ ಪದ್ಮಾ ಶೇಖರ್ ಅವರು ಮೈಸೂರಿನಲ್ಲಿ ವಿಶ್ರಾಂತ ಜೀವನನವನ್ನು ಸಾಗಿಸುತ್ತಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*