ಮಡಿಕೇರಿ NEWS DESK ಅ.30 : ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಬುಧವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ರಾಜ್ಯ ಮಟ್ಟದ ಶೈಕ್ಷಣಿಕ ಹಾಕಿ ಟೂರ್ನಿಯ 17 ವರ್ಷದ ಒಳಗಿನ ಬಾಲಕರು ಮತ್ತು ಬಾಲಕಿಯರು ಎರಡೂ ವಿಭಾಗಗಳಲ್ಲೂ ಮೈಸೂರು ವಿಭಾಗ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವು. ಬಾಲಕರ ವಿಭಾಗದಲ್ಲಿ ಮೈಸೂರು ವಿಭಾಗ ತಂಡವು ಕೊಡಗು ಜಿಲ್ಲೆಯ ಕೂಡಿಗೆ ಕ್ರೀಡಾ ವಸತಿ ಶಾಲಾ ತಂಡದ ವಿರುದ್ಧ 3- 1 ಗೋಲುಗಳಿಂದ ಜಯಗಳಿಸಿತು. ಬಾಲಕಿಯರ ವಿಭಾಗದಲ್ಲಿ ಮೈಸೂರು ವಿಭಾಗ ತಂಡವು ಕೊಡಗು ಜಿಲ್ಲೆಯ ಕೂಡಿಗೆ ವಸತಿ ಶಾಲೆ ತಂಡವನ್ನು 2-0 ಅಂತರದಿಂದ ಮಣಿಸಿತು. ಇದಕ್ಕೂ ಮೊದಲು ನಡೆದ ಪಂದ್ಯಗಳಲ್ಲಿ ಬೆಳಗಾವಿ ವಿಭಾಗ ತಂಡವು ಕಲಬುರಗಿ ವಿಭಾಗ ತಂಡವನ್ನು 5-2 ಗೋಲುಗಳಿಂದ, ಬಾಲಕರ ವಿಭಾಗದಲ್ಲಿ ಬೆಳಗಾವಿ ತಂಡ ಬೆಂಗಳೂರು ತಂಡವನ್ನು 5-1 ಗೋಲುಗಳ ಅಂತರದಿಂದ ಸೋಲಿಸಿತು.










