
ಮಡಿಕೇರಿ
NEWS DESK ಅ.31 : ಕೊಡಗು ಜಿಲ್ಲೆಯಲ್ಲಿ ಸುರಿದ ಹಿಂಗಾರು ಮಳೆ, ಬೆಳೆ ಹಾನಿ, ಜನ ಜಾನುವಾರುಗಳಿಗೆ ಮೇವು ಪೂರೈಕೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಹಲವು ವಿಷಯಗಳ ಕುರಿತು ಚರ್ಚಿಸಿದರು. ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡು ಮಾಹಿತಿ ನೀಡಿದರು.


