
ಕೊಯನಾಡು NEWS DESK ಅ.31 : ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ತಮ್ಮ ಬಲಗಾಲನ್ನು ಕಳೆದುಕೊಂಡಿದ್ದ ಶ್ಯಾಮ್ ಕೊಯನಾಡು ರವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಾಗೂ ಕೊಡಗು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶ್ಯಾಮ್ ಅವರು ಸಂಪಾಜೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯೆ, ಪ್ರಸ್ತುತ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯೆ ರಾಜೇಶ್ವರಿ ಅವರ ಪತಿಯಾಗಿದ್ದಾರೆ. ಕುಟುಂಬಕ್ಕೆ ಆಸರೆಯಾಗಿದ್ದ ಶ್ಯಾಮ್ ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸಹಕಾರ ನೀಡುವುದಾಗಿ ಶಾಸಕ ಪೊನ್ನಣ್ಣ ಭರವಸೆ ನೀಡಿದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.









