ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 69 ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಕೋಟೆ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿ ಸಚಿವರು ನಾಡಿನ ಜನತೆಗೆ ಸಂದೇಶ ನೀಡಿದರು. ಸಚಿವರ ಕನ್ನಡ ರಾಜ್ಯೋತ್ಸವ ಸಂದೇಶದ ಬಳಿಕ ಸಂತ ಮೈಕೆಲರ ಪ್ರೌಢ ಶಾಲೆ, ಸಂತ ಜೋಸೆಫg ಪ್ರೌಢ ಶಾಲೆ, ರಾಜ ರಾಜೇಶ್ವರಿ ಪ್ರೌಢ ಶಾಲೆ, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ ಶಾಲೆ,ಬಾಲಕರ ಬಾಲಮಂದಿರ ವಿದ್ಯಾರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ವಿದ್ಯಾಥಿರ್ಧಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ತಬ್ಧ ಚಿತ್ರಗಳ ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಿತು. ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪವಿಭಾಗಧಿಕಾರಿ ವಿನಯ್ ನರ್ವಾಡೆ,ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತಿತಿರ ಧರ್ಮಜಾ ಉತ್ತಪ್ಪ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಆಕರ್ಷಕ ಪಥ ಸಂಚಲನ :: ನಗರದ ವವಿಧ ಶಾಲಾ ಕಾಲೇಜುಗಳ ಎನ್‍ಸಿಸಿ, ಸೇವಾದಳ, ಸ್ಕೌಟ್ಸ್, ಗೈಡ್ಸ್, ಜಿಲ್ಲಾ ಪೊಲೀಸ್ ಸಶಸ್ತ್ರ ದಳ, ನಾಗರಿಕ ಸೇವಾ ಪೊಲೀಸ್, ಗೃಹ ರಕ್ಷಕ ದಳ, ಅರಣ್ಯ ಇಲಾಖೆಯಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಚಿವರು ಪಥ ಸಂಚಲನದ ಗೌರವ ವಂದನೆ ಸ್ವಕರಸಿದರು.