ಕುಶಾಲನಗರ ನ.1 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ
ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಿದ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಕೆ.ಎಸ್.ಹರೀಶ್, ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಇತಿಹಾಸ,ಪರಂಪರೆಯ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಕರ್ನಾಟಕ ನಮ್ಮ ಹೆಮ್ಮೆಯ ರಾಜ್ಯ, ಕನ್ನಡ ನಮ್ಮ ಮಾತೃಭಾಷೆ. ವಿದ್ಯಾರ್ಥಿಗಳು ಭಾಷಾಭಿಮಾನ ಬೆಳೆಸಿಕೊಂಡು ಕನ್ನಡ ನಾಡು- ನುಡಿ, ಕಲೆ- ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯಬೇಕು ಹೇಳಿದರು. ಕನ್ನಡ ರಾಜ್ಯೋತ್ಸವದ ಮಹತ್ವ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ಕನ್ನಡದ ಕಂಪು ಪಸರಿಸುವ ಈ ವಿಶೇಷ ದಿನದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕರ್ನಾಟಕ, ಕನ್ನಡ ಹಬ್ಬದ ಇತಿಹಾಸ, ಮಹತ್ವ ತಿಳಿದುಕೊಳ್ಳಬೇಕು ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್ ಮಾತನಾಡಿ,ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮರೆಯಬೇಕು ಎಂದರು. ಶಿಕ್ಷಕರಾದ ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ , ವಿದ್ಯಾರ್ಥಿಗಳು ಇದ್ದರು.