ಚನ್ನಪಟ್ಟಣ NEWS DESK ನ.1 : ಕರ್ನಾಟಕ ಉಪಚುನಾವಣೆಯಲ್ಲಿ ಪ್ರತಿಷ್ಠೆಯ ಕಣವೆಂದೇ ಪರಿಗಣಿಸಲ್ಪಟ್ಟಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿರುಸಿನ ಪ್ರಚಾರ ಕೈಗೊಂಡರು. ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ ಮತದಾರರ ಮನವೊಲಿಸುವ ಪ್ರಯತ್ನ ಮಾಡಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.











