ವಿರಾಜಪೇಟೆ ನ.2 NEWS DESK : ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ “ನುಡಿನೃತ್ಯ ಸಂಭ್ರಮ” ಕಾರ್ಯಕ್ರಮ ನಡೆಯಿತು. ಕನ್ನಡ ಭಾಷಾ ವಿಭಾಗ ಹಾಗೂ ಸಾಹಿತ್ಯ ಸಂಘ ಮತ್ತು ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಕಾಲೇಜಿನಲ್ಲಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ನಗಾರಿ ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ಎಲ್ಲಾ ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ನಡೆಯಿತು. ನಂತರ ಪದವಿ ವಿಭಾಗದ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಅವರು ಸೈಂಟ್ ಆನ್ಸ್ ನುಡಿನೃತ್ಯ ಸಂಭ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು. ಕನ್ನಡ ಬಳಗದ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜೇಶ್ ಪದ್ಮನಾಭ, ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ, ಕನ್ನಡ ವಿಭಾಗದ ಪ್ರಾಧ್ಯಾಪಕಿ ಪ್ರತಿಮಾ ರೈ, ವಿಭಾಗಗಳ ಮುಖ್ಯಸ್ಥರು, ಎಲ್ಲಾ ಸಹ ಪ್ರಾಧ್ಯಾಪಕರು, ಕನ್ನಡ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳು ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಬಿ.ಎನ್.ಶಾಂತಿ ಭೂಷಣ್ ಕಾರ್ಯಕ್ರಮವನ್ನು ನಿರೂಪಿಸಿದರು.