ಮಡಿಕೇರಿ NEWS DESK ನ.2 : ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.6 ರಂದು ಬುಟ್ಟಂಗಾಲದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬುಟ್ಟಂಗಾಲ ಜಂಕ್ಷನ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡಗಿನಲ್ಲಿ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವ್ಯಾಪಕವಾಗಿ ದುರುಪಯೋಗವಾಗುತ್ತಿದೆ. ಬೃಹತ್ ನಗರ ನಿರ್ಮಿಸುವ ಹುನ್ನಾರದೊಂದಿಗೆ ಬರಪೊಳೆ, ಕೊಂಗಣಪೊಳೆ ಸೇರಿದಂತೆ ಕಾವೇರಿ ನದಿಯ ಹಲವು ಉಪ ನದಿಗಳಿಗೆ ಜೀವ ಸೆಲೆಯಾಗಿರುವ ಪೆರುಂಬಾಡಿ, ಬಾಳುಗೋಡು, ನಾಂಗಾಲ, ಬುಟ್ಟಂಗಾಲ ಭಾಗದಲ್ಲಿ ಭೂಮಿ ಕಬಳಿಸಲು ಬಂಡವಾಳಶಾಹಿಗಳು ಹವಣಿಸುತ್ತಿದ್ದಾರೆ. ಬಂಡವಾಳಶಾಹಿ ಆರ್ಥಿಕ ಅಪರಾಧಿಗಳು, ರೆಸಾರ್ಟ್ ಮಾಫಿಯಾ, ಟೌನ್‌ಶಿಪ್ ಧಣಿಗಳು, ಹವಾಲ ದಂಧೆಕೋರರು ತಮ್ಮ ಕರಾಳ ವಿಷ ವರ್ತುಲಗಳ ಮೂಲಕ ಇಡೀ ಪ್ರದೇಶದ ಕೃಷಿ ಭೂಮಿಯನ್ನು ಕಬ್ಜ ಮಾಡಿ ಜಲಮೂಲ ಬಸಿದು ಗುಡ್ಡ-ಬೆಟ್ಟ ಕೊರೆದು ಕಾಡು, ಪ್ರಾಕೃತಿಕ ಸಂಪನ್ಮೂಲ ಲೂಟಿಮಾಡಿ ಕೊಡವ ಜನಪದ ಸಂಸ್ಕೃತಿಯ ಗರ್ಭಗುಡಿಯಾದ “ಮಂದ್”, ಗ್ರಾಮದೇವತೆ – ನಾಡ್ ದೇವತೆಗಳ ನೆಲೆಗಳನ್ನು ಧ್ವಂಸ ಮಾಡಿ ಕೊಡವ ಜನಸಂಖ್ಯಾ ಶಾಸ್ತ್ರದ ನರಮಂಡಲವಾಗಿರುವ ಪೆರವನಾಡ್, ಬೇರಳಿನಾಡ್ ಮತ್ತು ಕುತ್ತ್ನಾಡ್ ಪ್ರದೇಶದ ಜನಸಂಖ್ಯಾ ಪಲ್ಲಟಕ್ಕೆ ಹೊಂಚು ಹಾಕುತ್ತಿವೆ ಎಂದು ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕರಾಳ ಭೂ ಸುಧಾರಣಾ ಕಾಯ್ದೆ ಅಡಿಯಲ್ಲಿ ಹೊರ ರಾಜ್ಯ ಹೊರದೇಶದ ಉದ್ಯಮಪತಿಗಳು ಎಗ್ಗಿಲ್ಲದೆ ಕೊಡವ ಲ್ಯಾಂಡ್‌ನಲ್ಲಿ ಭೂ ಕಬ್ಜದಲ್ಲಿ ತೊಡಗಿದ್ದರೆ ಅವರು ಕರೆದು ತಂದ ಹೊರಗಿನ ಕಾರ್ಮಿಕರು ಇಲ್ಲಿ ಆಧಾರ್ ಮತ್ತು ಓಟರ್ ಐಡಿ ಪಡೆದು ಭೂರಹಿತ ಶೋಷಿತರೆಂದು ಬಿಂಬಿಸುವ ಮೂಲಕ ಅಕ್ರಮ-ಸಕ್ರಮ ಮತ್ತು ಆಶ್ರಯ ಯೋಜನೆಯ ಫಲಾನುಭವಿಗಳಾಗಿ ಇಲ್ಲಿನ ಜನಸಂಖ್ಯಾ ಶಾಸ್ತçದ ಪಲ್ಲಟಕ್ಕೆ ಕಾರಣವಾಗಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡುವುತ್ತಿದ್ದಾರೆ. ಹಬ್ಬ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕೇಂದ್ರಗಳು ಮತ್ತು ಕ್ರೀಡೋತ್ಸವಗಳಿಗೆ ದೇಣಿಗೆ ನೀಡಿ ಜನರ ಗಮನವನ್ನು ಬೇರೆಡೆಗೆ ಸೆಳೆದು ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ಉಲ್ಲಂಘಿಸುತ್ತಿದ್ದಾರೆ. ಪರಿಸರದ ಮೇಲೆ ದಾಳಿ ಮಾಡಿ ಅನಾರೋಗ್ಯಕರ ಪರಿಸ್ಥಿತಿಯನ್ನು ಸೃಷ್ಟಿಸಿ, ತಮ್ಮ ತಪ್ಪನ್ನು ಮುಚ್ಚಿ ಹಾಕಲು ವೈದ್ಯಕೀಯ ಸೇವೆ ನೀಡಿದಂತೆ ಮಾಡಿ ಸಾಮಾಜಿಕ ಕಳಕಳಿಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೊಡವರ ಸ್ವಾಧೀನದಲ್ಲಿರುವ ಭೂಮಿಯನ್ನು ಕೊಡವರಿಗೆ 30 ವರ್ಷಗಳ ಗುತ್ತಿಗೆಗೆ ನೀಡುವ ಸರ್ಕಾರದ ಯೋಜನೆಯನ್ನು ದುಷ್ಟಕೂಟ ವಿಫಲಗೊಳಿಸಲು ಯತ್ನಿಸುವ ಮೂಲಕ ಕೊಡವರನ್ನು ಸಂಕಷ್ಟ ಮತ್ತು ಆತಂಕಕ್ಕೆ ತಳ್ಳಿದ್ದಾರೆ. ಸಿದ್ದಾಪುರ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ನಿರಂತರ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಕಪ್ಪು ಹಣ ಹೊಂದಿರುವವರು ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣದಲ್ಲಿ ತೊಡಗಿರುವ ಉದ್ಯಮಪತಿಗಳು ಹಾಗೂ ಬಂಡವಾಳಶಾಹಿಗಳು ಇಡೀ ಕೊಡಗಿನಲ್ಲಿ ವ್ಯಾಪಿಸಿದ್ದು, ಪಾಕೃತಿಕ ಕೊಡುಗೆಗಳನ್ನು ಆವರಿಸಿಕೊಂಡಿದ್ದಾರೆ. ಸರ್ಕಾರ ಆದಾಯವನ್ನಷ್ಟೇ ಗುರಿ ಮಾಡಿಕೊಂಡು ಪವಿತ್ರ ಕೊಡವಲ್ಯಾಂಡ್ ನ್ನು ಮೋಜು, ಮಸ್ತಿಗಾಗಿ ಬಿಟ್ಟುಕೊಡುತ್ತಿದೆ ಎಂದು ಆರೋಪಿಸಿದ್ದಾರೆ. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಬೂಸ್ಟ್ ಮಾಡುವುದಾಗಿ ಜಿಲ್ಲಾಡಳಿತ ಹೇಳಿಕೆ ನೀಡುತ್ತಿದೆ. ಪ್ರವಾಸೋದ್ಯಮದ ಬೆಳವಣಿಗೆ ಎಂದರೆ ಹಸಿರ ಬೆಟ್ಟಗುಡ್ಡಗಳನ್ನು ಕಡಿದು ಜಲನಾಳಗಳನ್ನು ನಾಶಪಡಿಸುವುದೇ ಎನ್ನುವುದನ್ನು ಶ್ವೇತಪತ್ರದ ಮೂಲಕ ಸ್ಪಷ್ಟಪಡಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*