Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಲ್‍ನಾಡ್ ಹಾಕಿ-ಹಗ್ಗಜಗ್ಗಾಟ ಪಂದ್ಯಾವಳಿ : ಬಲ್ಲಮಾವಟಿ ತಂಡ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಲ್‍ನಾಡ್ ಹಾಕಿ-ಹಗ್ಗಜಗ್ಗಾಟ ಪಂದ್ಯಾವಳಿ : ಬಲ್ಲಮಾವಟಿ ತಂಡ ಚಾಂಪಿಯನ್*

ನವೆಂಬರ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ನ.5 NEWS DESK : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ನಡೆದ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಹಾಗೂ ಹಗ್ಗಜಗ್ಗಾಟ ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು ಯವಕಪಾಡಿ ತಂಡದ ವಿರುದ್ಧ ಜಯಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 12 ವರ್ಷಗಳ ಬಳಿಕ ಆಯೋಜಿಸಲಾಗಿದ್ದ ಗ್ರಾಮೀಣ ಮಟ್ಟದ ಪಂದ್ಯಾವಳಿಯಲ್ಲಿ ಬಲ್ಲಮಾವಟಿ ತಂಡವು ಯವಕಪಾಡಿ ತಂಡದ ವಿರುದ್ಧ ಸ್ಪರ್ಧಿಸಿತು. ಅಂತಿಮ ಪಂದ್ಯದಲ್ಲಿ ಸಡನ್ ಡೆತ್ ನಲ್ಲಿ ಬಲ್ಲಮಾವಟಿ ತಂಡ ಪ್ರಶಸ್ತಿಗೆ ಮುತ್ತಿಕ್ಕಿದರೆ ಯವಕಪಾಡಿ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಹಾಕಿ ಪಂದ್ಯಾವಳಿಯ ವಿಜೇತ ತಂಡಕ್ಕೆ ಮಾಳೆಯಂಡ ಚೋಂದಮ್ಮ ಜ್ಞಾಪಕಾರ್ಥ ಅವರ ಮಕ್ಕಳಾದ ಭೀಮಯ್ಯ ಮತ್ತು ಪೊನ್ನಣ್ಣ ಪ್ರಯೋಜಿಸಿದ ಟ್ರೋಫಿ ಹಾಗೂ ರೂ.30,000 ನಗದು ಬಹುಮಾನವನ್ನು ವಿತರಿಸಲಾಯಿತು .ದ್ವಿತೀಯ ಸ್ಥಾನ ಗಳಿಸಿದ ಯವಕಪಾಡಿ ತಂಡಕ್ಕೆ ಮೂವೇರ ಚಂಗಪ್ಪ ದಂಪತಿ ಜ್ಞಾಪಕಾರ್ಥ ಮೂವೇರ ವಿಜು ಮಂದಣ್ಣ ಪ್ರಾಯೋಜಿಸಿದ ಟ್ರೋಫಿ ಹಾಗೂ 20000 ರೂ.ನಗದು ಬಹುಮಾನ ವಿತರಿಸಲಾಯಿತು. ಸೆಮಿ ಫೈನಲ್ ಪಂದ್ಯದಲ್ಲಿ ಬೇತು ತಂಡವನ್ನು ಸೋಲಿಸಿ, ಯವಕಪಾಡಿ ತಂಡ ಅಂತಿಮ ಸುತ್ತು ಪ್ರವೇಶಿಸಿತ್ತು. ಮರಂದೋಡ ತಂಡವನ್ನು ಮಣಿಸಿ ಬಲ್ಲಮಾವಟಿ ತಂಡ ಅಂತಿಮ ಮತ್ತು ಪ್ರವೇಶಿಸಿತ್ತುಯ. ಬಲ್ಲಮಾವಟಿ, ನಾಪೋಕ್ಲು, ಕಕ್ಕಬ್ಬೆ-ಕುಂಜಿಲ ಮತ್ತು ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಒಟ್ಟು 16 ತಂಡಗಳು ಪಾಲ್ಗೊಂಡಿದ್ದವು. ಅಂತರ ಗ್ರಾಮ ಮಹಿಳೆಯರ ಹಗ್ಗಜಗ್ಗಾಟ ಅಂತಿಮ ಸ್ಪರ್ಧೆ ಬಲ್ಲಮಾವಟಿ ಮತ್ತು ನಾಪೋಕ್ಲು ತಂಡಗಳ ನಡುವೆ ನಡೆಯಿತು.ಬಲ್ಲಮಾವಟಿ ತಂಡ ಪ್ರಶಸ್ತಿ ಗಳಿಸಿದರೆ ನಾಪೋಕ್ಲು ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.ಪ್ರಥಮ ಸ್ಥಾನ ಪಡೆದ ಬಲ್ಲಮಾವಟಿಟಿ ತಂಡಕ್ಕೆ ಚೀಯಂಡಿರ ಗಣಪತಿ ಜ್ಞಾಪಕಾರ್ಥ ಅವರ ಮಗ ದಿನೇಶ್ ಗಣಪತಿ ಪ್ರಾಯೋಜಿಸಿದ ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಲಾಯಿತು. ರನ್ನರ್ ಅಪ್ ಪ್ರಶಸ್ತಿ ಗಳಿಸಿದ ನಾಪೋಕ್ಲು ತಂಡಕ್ಕೆ ಮಚ್ಚುರ ಮಂದಣ್ಣ ಅವರ ಜ್ಞಾಪಕಾರ್ಥ ಅವರ ಮಗ ಯದು ಮಂದಣ್ಣ ಪ್ರಾಯೋಜಿಸಿದ ಟ್ರೋಫಿ ಹಾಗೂ ನಗದು ಬಹುಮಾನವನ್ನು ವಿತರಿಸಲಾಯಿತು. ಅಂತರ ಪ್ರೌಢಶಾಲಾ ಹಾಕಿ ಟೂರ್ನಿಯಲ್ಲಿ ಶ್ರೀರಾಮ ಟ್ರಸ್ಟ್ ವಿದ್ಯಾ ಸಂಸ್ಥೆಯ ತಂಡವು ಪ್ರೌಢಶಾಲೆ ಕಕ್ಕಬ್ಬೆ ಪ್ರೌಢಶಾಲಾ ತಂಡವನ್ನು 4-1 ರ ಅಂತರದಲ್ಲಿ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಮುಖ್ಯ ಅತಿಥಿ ಮೇಜರ್ ಜನರಲ್ ಮೂವೇರ್ ನಂಜಪ್ಪ ಮಾತನಾಡಿ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಹೊರಹೊಮ್ಮಲು ಕ್ರೀಡಾಕೂಟ ಸಹಕಾರಿ. ಕ್ರೀಡಾಕೂಟದ ಆಯೋಜನೆಗೆ ಎಲ್ಲರೂ ಕೈಜೋಡಿಸಬೇಕು ಎಂದರು. ನಾಲ್ನಾಡ್ ಹಾಕಿ ಕ್ಲಬ್ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಕುಟುಂಬದ ಪ್ರಯೋಜಕತ್ವದಲ್ಲಿ ಗ್ರಾಮೀಣ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು ವಿವಿದ ಜನಾಂಗಗಳ ಕ್ರೀಡಾ ಪ್ರತಿಭೆ ಹೊರಹೊಮ್ಮಲು ಪಂದ್ಯಾವಳಿ ಸಹಕಾರಿ ಆಗಲಿದೆ ಎಂದರು. ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ 16 ಗ್ರಾಮಗಳ ಯುವ ಆಟಗಾರರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದಾರೆ. ಮುಂದಿನ ಏಪ್ರಿಲ್ ಮೇ ತಿಂಗಳಲ್ಲಿ ಕ್ಲಬ್ ವತಿಯಿಂದ ಮಕ್ಕಳಿಗೆ ನುರಿತ ತರಬೇತಿದಾರರಿಂದ ಹಾಕಿ ತರಬೇತಿ ನೀಡಲಾಗುವುದು ಎಂದರು. ನೇತಾಜಿ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಮುಕ್ಕಾಟಿರ ವಿನಯ್ ಮಾತನಾಡಿ ಕ್ರೀಡಾಕೂಟದ ಮೂಲಕ ಎಲ್ಲಾ ಕೊಡವ ಭಾಷಿಕ ಜನಾಂಗಗಳಿಗೆ ಪ್ರಯೋಜನವಾಗಲಿದೆ. ಊರು, ನಾಡು, ದೇವಾಲಯಕ್ಕೆ ಗ್ರಾಮಸ್ಥರು ತೆರಿಗೆ ನೀಡುವಂತೆ ಕ್ರೀಡಾಕೂಟಕ್ಕೂ ಸಹಕರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಹಾಕಿ ಆಟಗಾರ ಅಪ್ಪಚೆಟ್ಟೋಳಂಡ ಹರ್ಷಿತ್ ಅಯ್ಯಪ್ಪ ಹಾಗೂ ಸಮಾಜಸೇವಕ ನುಚ್ಚಿಮಣಿಯಂಡ ಚಿಂಗಪ್ಪ ಅವರನ್ನು ಸನ್ಮಾನಿಸಲಾಯಿತು. ಮಹಿಳೆಯರ ಅಂತರ ಗ್ರಾಮ ಹಗ್ಗ ಜಗ್ಗಾಟದ ಅಂತಿಮ ಪಂದ್ಯವನ್ನು ನೆಲಜಿ ಮಹಿಳಾ ಸಮಾಜದ ಅಧ್ಯಕ್ಷ ಅಪ್ಪುಮಣಿಯಂಡ ಡೇಸಿಸೋಮಣ್ಣ, ಕಾವೇರಿ ಮಹಿಳಾ ಸಮಾಜದ ಅಧ್ಯಕ್ಕೆ ಅಪ್ಪಚೆಟ್ಟೋಳಂಡ ವನು ವಸಂತ ಹಾಗೂ ಗ್ರಾ.ಪಂ ಅಧ್ಯಕ್ಷೆ ಮೇದೂರ ಶಾಂತಿ ಉದ್ಘಾಟಿಸಿದರು. ಹಾಕಿ ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಟ್ರೋಫಿ ದಾನಿಗಳಾದ ಮಾಳೆಯಂಡ ಬಿನು ಭೀಮಯ್ಯ, ಮೂವೆರ ವಿನು ಮಂದಣ್ಣ, ಚೀಯಂಡಿರ ದಿನೇಶ್, ಮಚ್ಚುರ ಯದುಕುಮಾರ್ ಉಪಸ್ಥಿತರಿದ್ದರು. ಮನು ವಸಂತ ಪ್ರಾರ್ಥಿಸಿದರು, ಮಿಟ್ಟು ಪೂಣಚ್ಚ ಸ್ವಾಗತಿಸಿದರು. ಮಾಳೆಟಿರ ಶ್ರೀ ನಿವಾಸ್ ಕಾರ್ಯಕ್ರಮ ನಿರೂಪಿಸಿದರು.

ವರದಿ : ದುಗ್ಗಳ ಸದಾನಂದ. 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.