ಮಡಿಕೇರಿ ನ.5 NEWS DESK : ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ತಿಳಿಸಿದ್ದಾರೆ. ಅನಧಿಕೃತವಾಗಿ ದತ್ತು ನೀಡುವುದು ಹಾಗೂ ಪಡೆಯುವುದು ಶಿಕ್ಷಾರ್ಹ ಅಪರಾಧ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 80 ಹಾಗೂ 81 ರನ್ವಯ ಯಾವುದೇ ವ್ಯಕ್ತಿಯಾಗಲಿ ಅಥವಾ ಸಂಸ್ಥೆಯಾಗಲಿ ಯಾವುದೇ ಅನಾಥ/ ಪರಿತ್ಯಜಿಸಲ್ಪಟ್ಟ ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿ ಅಥವಾ ಸಂಸ್ಥೆಗೆ 5 ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ. ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ. 08272-228800 ನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.