



ಮಡಿಕೇರಿ ನ.5 NEWS DESK : ಜಿಲ್ಲೆಯಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳನ್ನು ನಿಷೇಧಿಸಲು ಮತ್ತು ಮಾರಾಟ ಮಾಡುವುದನ್ನು ತಡೆಯಗಟ್ಟಲು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ದೂರು ಮತ್ತು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳೊಂದಿಗೆ ವಿಧಾನ ಸೌಧ ಕಚೇರಿಯಲ್ಲಿ ತುರ್ತುಸಭೆ ನಡೆಸಿದ ಶಾಸಕರು, ಅಧಿಕಾರಿಗಳೊಂದಿಗೆ ದೂರಿನ ಕುರಿತು ಮಾಹಿತಿ ಪಡೆದರು. ಈ ಸಂದರ್ಭ ಮಾಹಿತಿ ನೀಡಿದ ಅಧಿಕಾರಿಗಳು ಕೊಡಗು ಜಿಲ್ಲೆ ಹಾಗೂ ಕೇರಳ ಜಿಲ್ಲೆ ಗಡಿಭಾಗವಾದ ಕುಟ್ಟ, ಮಾಕುಟ್ಟ ಮತ್ತು ಪೆರುಂಬಾಡಿ ವ್ಯಾಪ್ತಿಯಲ್ಲಿ ಕೇರಳದ ಆಹಾರ ಪದಾರ್ಥಗಳು ಸರಬರಾಜು ಆಗುತ್ತಿದ್ದು. ಆಹಾರ ಪದಾರ್ಥಗಳಲ್ಲಿ ತಯಾರಿಕಾ ದಿನಾಂಕ ಹಾಗೂ ತಯಾರಿಕೆ ಮಾಡುವವರ ವಿವರ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಕೃತಕ ಬಣ್ಣಗಳನ್ನು ಸೇರಿಸಿರುವುದರ ಬಗ್ಗೆ 90 ಆಹಾರ ಪದಾರ್ಥಗಳನ್ನು ವಿಶ್ಲೇಷಣಿಗಾಗಿ (IADFAC) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲದ ವರದಿಗಳಲ್ಲಿ 31 ಆಹಾರ ಮಾದರಿಗಳು ಅಸುರಕ್ಷಿತವೆಂದು, 4 ಆಹಾರ ಮಾದರಿಯಲ್ಲಿ ಕಡಿಮೆ ಗುಣಮಟ್ಟವಿದೆ ಎಂದು ದೃಢಪಟ್ಟಿರುವುದಾಗಿ ವಿವರಿಸಿದರು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಕೂಡಲೇ ಅಸುರಕ್ಷಿತವಾದ ಆಹಾರ ಪದಾರ್ಥಗಳನ್ನು ನಿಷೇಧಿಸಿ, ಅಂತಹ ಆಹಾರ ಪದಾರ್ಥಗಳನ್ನು ಮಾರಟ ಮಾಡದಂತೆ ತಡೆಯಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಕೊಡಗು ಜಿಲ್ಲಾ ಅಂಕಿತಾಧಿಕಾರಿ ಡಾ.ಅನಿಲ್ ದಾವನ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.