ಮಡಿಕೇರಿ NEWS DESK ನ.6 : ಕೊಡಗಿನ ಕ್ರೀಡಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕೊಡಗು ಪೊಲೀಸ್ ಇಲಾಖೆ ವತಿಯಿಂದ ಕೊಡಗು ಪೊಲೀಸ್ ಕ್ರಿಕೆಟ್ ಲೀಗ್ ಪಂದ್ಯಾವಳಿ ನ.9 ರಂದು ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿವೈಎಸ್‌ಪಿ ಮಹೇಶ್ ಕುಮಾರ್ ಅವರ ಉಸ್ತುವಾರಿಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮಾಸ್ಟರ್ ಕಾಪ್ಸ್, ಸೂಪರ್ ಕಾಪ್ಸ್, ಡೈನಾಮಿಕ್ ಕಾಪ್ಸ್, ವಿಕ್ಟರಿ ಕಾಪ್ಸ್ ಮತ್ತು ಡೇರಿಂಗ್ ಕಾಪ್ಸ್ ತಂಡಗಳ ನಡುವೆ ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. ಶನಿವಾರ ಬೆಳಿಗ್ಗೆ 7.30 ಗಂಟೆಗೆ ಕೊಡಗು ಪೊಲೀಸ್ 11 ಮತ್ತು ಕೊಡಗು ಮೀಡಿಯಾ ವಾರಿಯರ್ಸ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.










