Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀಮಂಗಲದಲ್ಲಿ ಕಸಾಪ ದತ್ತಿನಿಧಿ ಕಾರ್ಯಕ್ರಮ : ರಾಜ್ಯ ಪ್ರಶಸ್ತಿ ಪುರಸ್ಕೃತೆ ಕೈಬಲಿರ ಪಾರ್ವತಿ ಬೋಪಯ್ಯರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀಮಂಗಲದಲ್ಲಿ ಕಸಾಪ ದತ್ತಿನಿಧಿ ಕಾರ್ಯಕ್ರಮ : ರಾಜ್ಯ ಪ್ರಶಸ್ತಿ ಪುರಸ್ಕೃತೆ ಕೈಬಲಿರ ಪಾರ್ವತಿ ಬೋಪಯ್ಯರಿಗೆ ಸನ್ಮಾನ*

ನವೆಂಬರ್ 7, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.7 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಮಾಡುವ ಮೂಲಕ ಕನ್ನಡ ಸಾಹಿತ್ಯದ ಪರಿಚಯವನ್ನು ವಿದ್ಯಾರ್ಥಿ ಗಳಿಗೆ ಮಾಡಿಕೊಡುತ್ತಿರುವುದು ಶ್ಲಾಘನೀಯ ಎಂದು  ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಬೋಡಂಗಡ ಅಯ್ಯಪ್ಪ ನುಡಿದರು.  ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಮಂಗಲ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.ಮುಂದುವರೆದ ಅವರು ಕೊಡಗಿನ ಗಡಿಭಾಗವಾದ ಶ್ರೀಮಂಗಲ ಗ್ರಾಮದಲ್ಲಿ ಕನ್ನಡದ ಕಾರ್ಯಕ್ರಮಗಳ ಅವಶ್ಯಕತೆ ತುಂಬಾ ಇದ್ದು, ಗಡಿ ಪ್ರದೇಶದ ಎಲ್ಲಾ ಶಾಲೆಗಳಲ್ಲೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ಸಾಹಿತ್ಯ ಪರಿಷತ್ತು ದತ್ತಿನಿಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿ ಮೂಡಬೇಕು, ಕನ್ನಡ ನಾಡು ನುಡಿ ಆಚಾರ ವಿಚಾರ ಪರಂಪರೆಗಳ ಪರಿಚಯ ವಿದ್ಯಾರ್ಥಿಗಳಿಗೆ ಆಗಬೇಕು ಎನ್ನುವ ಉದ್ದೇಶವಿದ್ದು ಅದು ಕಾರ್ಯಗತವಾದಾಗ ಮಾತ್ರ ನಾಡು ನುಡಿ ಉಳಿಯಲು ಸಾಧ್ಯ ಎಂದರು.  ದಿ. ಮೊಣ್ಣಂಡ ಕೆ ಚಂಗಪ್ಪ ಜ್ಞಾಪಕ ದತ್ತಿನಿಧಿ ಮತ್ತು ದಿ. ಸಾಹಿತಿ ಮುಲ್ಲೆಂಗಡ ಬೇಬಿ ಚೋಂದಮ್ಮ ಸ್ಮಾರಕ ದತ್ತಿನಿಧಿ ಕುರಿತು ಮಾಹಿತಿ ನೀಡಿದರು. ಮಂಡ್ಯದಲ್ಲಿ ಇದೇ ಡಿಸೆಂಬರ್ 20, 21, 22 ರಂದು ಜರಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಿಗರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ಹೊತ್ತ ರಥವು‌ ಇದೇ ತಿಂಗಳ ದಿನಾಂಕ 10 ಮತ್ತು 11ರಂದು ಕೊಡಗು ಜಿಲ್ಲೆಯಲ್ಲಿ ಸಂಚರಿಸಲಿದ್ದು ಪೊನ್ನಂಪೇಟೆಯಲ್ಲಿ ನವೆಂಬರ್ 10ರಂದು ವಾಸ್ತವ್ಯ ಹೂಡಲಿದೆ. ಅಂದು ಪೊನ್ನಂಪೇಟೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿದೆ ಎಂದು ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ದಿ. ಮೊಣ್ಣಂಡ ಕೆ ಚಂಗಪ್ಪ ಜ್ಞಾಪಕ ದತ್ತಿ ನಿಧಿಯ ಆಶಯದಂತೆ ಕನ್ನಡ ಕೊಡವ ಭಾಷಾ ಬೆಳವಣಿಗೆ ಕುರಿತು ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಅಜ್ಜಮಾಡ ರೇಖ ಮಾತನಾಡುತ್ತಾ ಕನ್ನಡ ಮತ್ತು ಕೊಡವ ಎರಡು ಭಾಷೆಗಳು ಒಂದಕ್ಕೊಂದು ಹೊಂದಿಕೊಂಡು ಇರುವಂತಹ ಭಾಷೆಗಳಾಗಿದ್ದು ಕನ್ನಡ ಭಾಷೆಯ ಬೆಳವಣಿಗೆಯೊಂದಿಗೆ ಕೊಡವ ಭಾಷೆ ಕೂಡ ಅತ್ಯುತ್ತಮ ಬೆಳವಣಿಗೆಗೊಂಡಿದೆ. ಪಂಪನಿಂದ ಇಂದಿನ ಸಾಹಿತಿಗಳವರೆಗೆ ಕನ್ನಡ ಸಾಹಿತ್ಯ ಲೋಕ ಹಲವಾರು ಮಜಲುಗಳನ್ನು ಕಂಡಿದ್ದು, ಕೊಡವ ಸಾಹಿತ್ಯದ ಬೆಳವಣಿಗೆಗೆ ಸಾಹಿತಿಗಳಾದ ಹರದಾಸ ಅಪಚ್ಚ ಕವಿ, ಬಿ.ಡಿ.ಗಣಪತಿ, ಕಾಕೆಮಾನಿ ಅವರಿಂದ ಇಂದಿನ ಸಾಹಿತಿಗಳವರೆಗೆ ವಿವರಿಸಿದ್ದರು. ದಿ. ಸಾಹಿತಿ ಮುಲ್ಲೆಂಗಡ ಬೇಬಿ ಚೋಂದಮ್ಮ ಸ್ಮಾರಕ ದತ್ತಿನಿಧಿಯ ಆಶಯದಂತೆ ಕೊಡಗಿನ ಮಹಿಳಾ ಸಾಹಿತಿಗಳ ಕುರಿತು ಶ್ರೀಮಂಗಲ ಜೆ.ಸಿ ಶಾಲೆಯ ಅಧ್ಯಾಪಕಿ ಶ್ರೀಮತಿ ಬಿ.ಯು.ಯಶೋದ ರವರು ಮಾತನಾಡುತ್ತಾ ದಿ. ಸಾಹಿತಿ ಮುಲ್ಲೆಂಗಡ ಬೇಬಿ ಚೋಂದಮ್ಮ ರವರು ಕೊಡಗಿನ ಹಿರಿಯ ಸಾಹಿತಿಗಳಾಗಿದ್ದು ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ. ಅವರ ಪತಿ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮತ್ತು ಮುಲ್ಲೆಂಗಡ ಮಧೋಶ್ ಪೂವಯ್ಯರವರು ಕೊಡಗಿನ ಮಹಿಳಾ ಸಾಹಿತಿಗಳ ಕುರಿತು ಉಪನ್ಯಾಸ ನೀಡಲು ದತ್ತಿ ಸ್ಥಾಪಿಸಿದ್ದು, ಕೊಡಗಿನ ಗೌರಮ್ಮ, ಪದ್ಮಾವತಿ, ಕೂತಂಡ ಪಾರ್ವತಿ ಪೂವಯ್ಯ, ಮಂಡೀರ ಜಯ ಅಪ್ಪಣ್ಣ, ಡಾ. ಕವಿತಾ ರೈ, ಎನ್‌.ಜಿ ಕಾವೇರಿ, ಬೋವೇರಿಯಂಡ ಬೇಬಿ ಚಿಣ್ಣಪ್ಪ, ಶ.ಗ ನಯನತಾರಾ, ರಶ್ಮಿ ನಂಜಪ್ಪ, ಮಂಡೆಪಂಡ ಗೀತಾ ಮಂದಣ್ಣ, ಕುಲ್ಲಚಂಡ ಚಿಪ್ಪಿ ಕಾರಿಯಪ್ಪ, ಪಾಲಚಂಡ ತುಳಸಿ, ಡಾ. ಪದ್ಮಶೇಖರ್, ಸುಮಾ ಶಾನಭಾಗ್, ಡಾ. ರೇಖಾ, ಪಿ.ಎ ಸುಶೀಲ, ವಿಜಯ ವಿಷ್ಣು ಭಟ್, ಸ್ಮಿತಾ ಅಮೃತರಾಜ್, ನಯನ ಕಶ್ಯಪ್, ಉಳುವಂಗಡ ಕಾವೇರಿ ಉದಯ, ಅಜ್ಜಮಾಡ ಸಾವಿತ್ರಿ, ಫ್ಯಾನ್ಸಿ ಮುತ್ತಣ್ಣ, ಸಹನ ಕಾಂತಬೈಲು ಇವರುಗಳು ಸಣ್ಣ ಕಥೆ, ಕಾದಂಬರಿ, ಕವನ ಸಂಕಲನ, ಕ್ಷೇತ್ರ ಪರಿಚಯ, ವಿಜ್ಞಾನ ವಿಚಾರಗಳು, ಪ್ರಬಂಧ, ಬಾಲ ಸಾಹಿತ್ಯ, ಅನುವಾದ ಸಾಹಿತ್ಯ ಹೀಗೆ ಹತ್ತು ಹಲವು ವಿಚಾರಗಳ ಬಗ್ಗೆ ಪುಸ್ತಕ ರಚಿಸಿ ಜಗತ್ತಿಗೆ ಉತ್ತಮ ಸಂದೇಶ ನೀಡಿದಾರೆ. ಸಾಹಿತ್ಯವಲ್ಲದೆ ಸಾಂಸ್ಕೃತಿಕ, ರಾಜಕೀಯ, ಕ್ರೀಡೆ, ವಿಮರ್ಶೆ, ಮನರಂಜನೆ,ಪರಿಸರ ವಲಯದಲ್ಲೂ ಕೂಡ ಸಾಕಷ್ಟು ಕೃತಿಗಳನ್ನು ರಚನೆ ಮಾಡಿದ್ದಾರೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮುಳ್ಳೆಂಗಡ ಸೋಮಯ್ಯ ಮಾತನಾಡುತ್ತಾ ವಿದ್ಯಾರ್ಥಿಗಳ ಸಾಹಿತ್ಯಿಕ, ಬೌದ್ಧಿಕ ಬೆಳವಣಿಗೆಗೆ ಈ ರೀತಿಯ ಕಾರ್ಯಕ್ರಮಗಳು ಪೂರಕ ಎಂದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಮಾತನಾಡುತ್ತಾ ಪಾಠ ಪಠ್ಯಗಳೊಂದಿಗೆ ಸಾಹಿತ್ಯ ಕವನ ಕಾದಂಬರಿಗಳನ್ನು ಕೂಡ ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಮನೆಯಲ್ಲಿ ಯಾವುದೇ ಭಾಷೆ ಮಾತನಾಡಿದರೂ ಸಾರ್ವಜನಿಕವಾಗಿ ಕನ್ನಡ ಮಾತನಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದುಕೊಂಡು ಕನ್ನಡದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದರು. ದಾನಿಗಳು ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿ ಪುರಸ್ಕ್ರತರು  ಶ್ರೀಮತಿ ಕೈಬಲಿರ ಪಾರ್ವತಿ ಬೋಪಯ್ಯ ಅವರನ್ನು ಸನ್ಮಾನಿಸಲಾಯಿತು. ನಾಡತಕ್ಕರು ಮತ್ತು ಟಿ.ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೈಬುಲಿರ ಹರೀಶ್ ಅಪ್ಪಯ್ಯ ಮಾತನಾಡುತ್ತಾ ಕನ್ನಡ ನಾಡು ನುಡಿ ಕುರಿತು ಮಕ್ಕಳಿಗೆ ತಿಳಿಯಪಡಿಸಲು ಈ ತರದ ದತ್ತಿ ಕಾರ್ಯಕ್ರಮಗಳು ಉಪಯುಕ್ತವಾಗಿವೆ. ವಿದ್ಯಾರ್ಥಿಗಳು ಪಠ್ಯ ಪುಸ್ತಕದೊಂದಿಗೆ ಸಾಹಿತಿಕ ಓದು ಕೂಡ ಅವಶ್ಯಕ ಎಂದರು. ದತ್ತಿದಾನಿಗಳು ತೂಕ್ ಬೊಳಕ್ ಕೊಡವ ಪತ್ರಿಕೆಯ ಸಂಪಾದಕರು ಹಾಗೂ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಮುಲ್ಲೆಂಗಡ ಮದೋಶ್ ಪೂವಯ್ಯ ತಮ್ಮ ಅನುಭವಗಳನ್ನು ಬಿಚ್ಚಿಡುತ್ತಾ ದತ್ತಿ ಕಾರ್ಯಕ್ರಮಗಳ ಕುರಿತು ವಿವರವಾದ ವಿಚಾರಗಳನ್ನು ತಿಳಿಸಿದರು. ಅಲ್ಲವೇ 40 ವರ್ಷಗಳ ಕಾಲ ಶಿಕ್ಷಕಿಯಾಗಿ ದುಡಿದ ತಮ್ಮ ತಾಯಿಯವರು ಅವರ ಕಣ್ಣು ಮತ್ತು ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ನೀಡಿದ ಕುರಿತು ವಿವರಿಸಿದ್ದರು. ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸರ್ವೆ ಇಲಾಖೆಯ ಅಧಿಕಾರಿಯೂ ಆಗಿರುವ ಬಾನಂಗಡ ಅರುಣ್ ಕುಮಾರ್ ಮಾತನಾಡುತ್ತಾ ತಮ್ಮ ಕಚೇರಿಯಲ್ಲಿ ಸಾರ್ವಜನಿಕರು ನೀಡುವ ಅರ್ಜಿಗಳನ್ನು ಕನ್ನಡದಲ್ಲಿ ನೀಡಬೇಕು ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದು ಅದನ್ನು ಮುಂದುವರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀಮತಿ ಉಳುವಂಗಡ ಕಾವೇರಿ ಉದಯ ಮಾತನಾಡುತ್ತಾ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಅರ್ಪಿಸಿದರು. ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಪೊನ್ನಂಪೇಟೆ ತಾಲೂಕು ಕ.ಸಾ.ಪ ಕಾರ್ಯದರ್ಶಿ ಕೆ.ವಿ ರಾಮಕೃಷ್ಣ, ಶ್ರೀಮಂಗಲ ಹೋಬಳಿ ಗೌರವ ಕೋಶಾಧಿಕಾರಿ ಎಸ್.ಎಂ ರಾಜೇಂದ್ರ ಪ್ರಸಾದ್, ಸಂಘಟನಾ ಕಾರ್ಯದರ್ಶಿ ಪಿ.ಎಂ ಪೂಣಚ್ಚ, ನಿರ್ದೇಶಕರುಗಳಾದ ಶ್ರೀಮತಿ ಅಜ್ಜಮಾಡ ಸಾವಿತ್ರಿ, ಟಿ.ಆರ್ ವಿನೋದ್, ಎಸ್.ಡಿ ಗಿರೀಶ್, ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು,ಕಾಲೇಜಿನ ವಿದ್ಯಾರ್ಥಿಗಳು ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಸಿದ ಗೀತ ಗಾಯನ ಸ್ಪರ್ಧೆಯಲ್ಲಿ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ವಿದ್ಯಾರ್ಥಿನಿ ರೂಪ ಪಿ.ಎ ಪ್ರಥಮ ಬಹುಮಾನ, ಪರ್ಸೀನಾ ಬೀವಿ. ದ್ವಿತೀಯ, ಅನುಷಾ ಪಿ.ಆರ್ ತೃತೀಯ ಬಹುಮಾನ ಪಡೆದರು ಪ್ರೌಢಶಾಲಾ ವಿಭಾಗದಲ್ಲಿ ಪ್ರೀನಿತ್ ಎನ್.ಕೆ. ಪ್ರಥಮ ಅಲನ್ಯ ಸುರೇಶ ದ್ವಿತೀಯ, ಭೋಜಮ್ಮ ತೃತೀಯ ಬಹುಮಾನ ಪಡೆದರು. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಾಗೇಶ್ ಕುಮಾರ್ ನಿರೂಪಿಸಿದರು ಉಪನ್ಯಾಸಕಿ ಶ್ರೀಮತಿ ಪನ್ನ ಸ್ವಾಗತಿಸಿದರು. ಉಪನ್ಯಾಸಕ ಕೆ.ಆರ್.ಅರುಣಾಚಲ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.