ವಿರಾಜಪೇಟೆ ನ.7 NEWS DESK : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಉದ್ಯೋಗಕ್ಕಾಗಿ ನೆಟ್‍ವರ್ಕಿಂಗ್ ಮತ್ತು ಮಾರ್ಕೆಟಿಂಗ್‍ಗಾಗಿ ಸಾಮಾಜಿಕ ಮಾಧ್ಯಮದ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ಲೇಸ್‍ಮೆಂಟ್ ಸೆಲ್ ಅಧಿಕಾರಿ ಹಾಗೂ ಸಹಾಯಕ ಪ್ರಾಧ್ಯಾಪಕ ಕೆ.ಸಿ.ಶಿಲ್ಪ ಮಾತನಾಡಿ, ಸಾಮಾಜಿಕ ಮಾಧ್ಯಮದಿಂದ ವಿದ್ಯಾರ್ಥಿಗಳ ಮೇಲೆ ಆಗುವ ಪ್ರಭಾವ ಮತ್ತು ಅದರ ಅನುಕೂಲತೆ ಹಾಗೂ ಅನಾನುಕೂಲತೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಹಾಗೂ ಐಕ್ಯೂಎಸಿ ಸಂಚಾಲಕ ಡಾ. ಕೆ.ಬಸವರಾಜು, ಕಾರ್ಯಕ್ರಮದ ಸಂಚಾಲಕರು ಹಾಗೂ ಉಪನ್ಯಾಸಕರಾದ ಕೆ.ಎಸ್.ಕಾರ್ಯಪ್ಪ, ಕೆ.ಸಿ,ಧನ್ಯ, ಸುಮಯ್ಯ ತಬಸ್ಸುಂ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು.