ಸೋಮವಾರಪೇಟೆ NEWS DESK ನ.8 : ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಸುಂಟಿಕೊಪ್ಪ ಸಮೀಪದ ಕಾಫಿ ತೋಟವೊಂದರಲ್ಲಿ ಮೃತದೇಹ ಸುಟ್ಟ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಮುದ್ದು ಮಾದೇವ ಹಾಗೂ ಸಿಬ್ಬಂದಿ ಸುಧೀಶ್ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಶಂಸಾನ ಪತ್ರ ನೀಡಿ ಗೌರವಿಸಿದರು. ನಿಷ್ಠೆ, ಶ್ರದ್ಧೆ, ದಕ್ಷತೆ, ಪ್ರಾಮಾಣಿಕತೆ, ಧೈರ್ಯ ಮೆರೆದ ಪೊಲೀಸರ ಕಾರ್ಯವೈಖರಿಯ ಬಗ್ಗೆ ಎಸ್‌ಪಿ ಪ್ರಶಂಸೆ ವ್ಯಕ್ತಪಡಿಸಿದರು.










