ಮಡಿಕೇರಿ ನ.8 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಕೊಡಗಿನ ವಿವಿಧ ಶಾಲೆಗಳು ಗೆಲುವು ಸಾಧಿಸಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿವೆ.
ಜಿಲ್ಲಾ ಮಟ್ಟದ ವಿಜೇತರು :: ಜಿಲ್ಲಾ ಮಟ್ಟದ ಸ್ಪರ್ಧೆಯ ಸ್ಕೌಟ್ಸ್ ವಿಭಾಗದಲ್ಲಿ ಕುಶಾಲನಗರದ ಅತ್ತೂರು ಜ್ಞಾನ ಗಂಗಾ ವಸತಿ ಶಾಲೆ ಪ್ರಥಮ, ವಿರಾಜಪೇಟೆ ಅರಮೇರಿ ಎಸ್.ಎಂ.ಎಸ್ ಶಾಲೆ ದ್ವಿತೀಯ, ನಾಪೋಕ್ಲು ಅಂಕುರ್ ಪಬ್ಲಿಕ್ ಸ್ಕೂಲ್ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಗೈಡ್ಸ್ ವಿಭಾಗದಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಪ್ರಥಮ, ಕುಶಾಲನಗರ ಫಾತಿಮಾ ಪ್ರೌಢ ಶಾಲೆ ದ್ವಿತೀಯ, ಚೆನ್ನನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದೆ. ಬುಲ್ ಬುಲ್ಸ್ ವಿಭಾಗದಲ್ಲಿ ಕೊಟ್ಟಮುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ, ಮಡಿಕೇರಿಯ ಸಂತ ಜೋಸೆಫರ ಶಾಲೆ ದ್ವಿತೀಯ, ಗೋಣಿಕೊಪ್ಪ ಲಯನ್ಸ್ ಪ್ರಾಥಮಿಕ ಶಾಲೆ ತೃತೀಯ ಸ್ಥಾನವನ್ನು ಗಳಿಸಿದೆ. ಕಬ್ಸ್ ವಿಭಾಗದಲ್ಲಿ ಸುಂಟಿಕೊಪ್ಪ ಸಂತ ಆಂಥೋಣಿ ಶಾಲೆ ಪ್ರಥಮ, ಗೋಣಿಕೊಪ್ಪ ಲಯನ್ಸ್ ಪ್ರಾಥಮಿಕ ಶಾಲೆ ದ್ವಿತೀಯ, ರೋವರ್ಸ್ ವಿಭಾಗದಲ್ಲಿ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಥಮ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ, ರೇಂಜರ್ಸ್ ವಿಭಾಗದಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ತೀರ್ಪುಗಾರರಾಗಿ ಕಾವ್ಯಶ್ರೀ ಕಪಿಲ್ ಹಾಗೂ ವೀಣಾ ಹೊಳ್ಳ ಕಾರ್ಯನಿರ್ವಹಿಸಿದರು.
::: ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ::: ನ.12 ರಂದು ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಸ್ಕೌಟ್ಸ್ ವಿಭಾಗದಿಂದ ಕುಶಾಲನಗರ ಅತ್ತೂರು ಜ್ಞಾನಗಂಗಾ ವಸತಿ ಶಾಲೆ, ವಿರಾಜಪೇಟೆ ಅರಮೇರಿ ಎಸ್.ಎಂ.ಎಸ್ ವಿದ್ಯಾ ಸಂಸ್ಥೆ, ಗೈಡ್ಸ್ ವಿಭಾಗದಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಕುಶಾಲನಗರದ ಫಾತಿಮ ಪ್ರೌಢಶಾಲೆ, ಬುಲ್ಬುಲ್ಸ್ ವಿಭಾಗದಿಂದ ಕೊಟ್ಟಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡಿಕೇರಿಯ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆ, ಕಬ್ಸ್ ವಿಭಾಗದಿಂದ ಸುಂಟಿಕೊಪ್ಪದ ಸಂತ ಅಂತೋಣಿ ಶಾಲೆ, ಗೋಣಿಕೊಪ್ಪ ಲಯನ್ಸ್ ಪ್ರಾಥಮಿಕ ಶಾಲೆ, ರೋವರ್ಸ್ ವಿಭಾಗದಿಂದ ಭಾಗಮಂಡಲ ಶ್ರೀಕಾವೇರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ, ರೇಂಜರ್ಸ್ ವಿಭಾಗದಿಂದ ಮಡಿಕೇರಿಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪಾಲ್ಗೊಳ್ಳುತ್ತಿವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ತಿಳಿಸಿದ್ದಾರೆ.