Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡ ಜ್ಯೋತಿ ರಥಯಾತ್ರೆಗೆ ಕೊಡಗು ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡ ಜ್ಯೋತಿ ರಥಯಾತ್ರೆಗೆ ಕೊಡಗು ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ*

ನವೆಂಬರ್ 10, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.10 : ಅಖಿಲ ಭಾರತ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಭಾನುವಾರ ಬರಮಾಡಿಕೊಂಡರು. ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಿಸಿ ರಥವನ್ನು ಸ್ವಾಗತಿಸಿದರು. ಹಾಸನ ಜಿಲ್ಲೆಯ ಕಲಾತಂಡಗಳು ರಣಕಹಳೆ ಊದುವ ಮೂಲಕ ಹಾಗೂ ಚೆಟ್ಟಿಮೇಳ ವಾದ್ಯ ನುಡಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀಶಕ್ತಿ ಗುಂಪಿನವರು ಪೂರ್ಣಕುಂಭ ಸ್ವಾಗತದೊಂದಿಗೆ ತಾಯಿ ಭುವನೇಶ್ವರಿ ಹೊತ್ತ ರಥವನ್ನು ಸ್ವಾಗತಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತ್ ಕಚೇರಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲ್ಲೂಕು ಘಟಕ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲರೂ ತಾಯಿ ಭುವನೇಶ್ವರಿ ರಥವನ್ನು ಬರ ಮಾಡಿಕೊಂಡರು.
ಬಳಿಕ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಮುಖ್ಯರಸ್ತೆಯಲ್ಲಿ ಸಾಗಿ ಸ್ಕಾ÷್ವಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಎಲ್ಲರೂ ಸೇರಿದರು. ಲಹರಿ ಶಿಕ್ಷಕಿಯರ ತಂಡದವರು ನಾಡಗೀತೆ ಮತ್ತು ರೈತ ಗೀತೆ ಹಾಡಿದರು. ನಂತರ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ನೆರೆದಿದ್ದ ಎಲ್ಲರನ್ನು ಸ್ವಾಗತಿಸಿದರು.
ಇದೇ ಡಿಸೆಂಬರ್, 20 ರಿಂದ ಮೂರು ದಿನಗಳ ಕಾಲ ಮಂಡ್ಯ ನಗರದಲ್ಲಿ ನಡೆಯಲಿರುವ ಅಖಿಲ ಭಾರತ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ’ ಹಿನ್ನೆಲೆ ಕನ್ನಡ ಜ್ಯೋತಿ ರಥವನ್ನು ಕೊಡಗು ಜಿಲ್ಲೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಆ ನಿಟ್ಟಿನಲ್ಲಿ ಮಡಿಕೇರಿ ಮೂಲಕ ವಿರಾಜಪೇಟೆ-ಗೋಣಿಕೊಪ್ಪ-ಪೊನ್ನಂಪೇಟೆಗೆ ತೆರಳಲಿದೆ ಎಂದು ಮಾಹಿತಿ ನೀಡಿದರು. ನವೆಂಬರ್ 11 ರಂದು ಪೊನ್ನಂಪೇಟೆಯಿಂದ ಕುಶಾಲನಗರಕ್ಕೆ ತೆರಳಿ, ಕುಶಾಲನಗರದಲ್ಲಿ 5 ಸಹಸ್ರ ಜನರಿಂದ ಕನ್ನಡ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕನ್ನಡ ಭಾಷೆ, ನಾಡು-ನುಡಿ, ಸಂಸ್ಕೃತಿ ಕಲೆಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಇರಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷೆ ನಾಡು, ನುಡಿ, ಸಂಸ್ಕೃತಿ ಸಂದೇಶ ಸಾರುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು. ಕ್ರೆಸೆಂಟ್ ಶಾಲೆ ವಿದ್ಯಾರ್ಥಿಗಳು ಹಾಗೂ ನಗರದ ಬಾಲಕರ ಬಾಲಮಂದಿರದ ವಿದ್ಯಾರ್ಥಿಗಳು ಕನ್ನಡ ಗೀತೆಗಳಿಗೆ ನೃತ್ಯ ಪ್ರದರ್ಶನ ನೀಡಿ ಗಮನ ಸೆಳೆದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಪೌರಾಯುಕ್ತರಾದ ರಮೇಶ್, ತಾ.ಪಂ.ಇಒ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಪ್ರಕಾಶ್ ಆಚಾರ್ಯ, ಕೆ.ಟಿ.ಬೇಬಿ ಮ್ಯಾಥ್ಯೂ, ಬಿ.ಆರ್.ಜೋಯಪ್ಪ, ಅಂಬೆಕಲ್ಲು ಕುಶಾಲಪ್ಪ, ಅಂಬೆಕಲ್ಲು ನವೀನ್, ಎಚ್.ಎಸ್.ಪ್ರೇಮ್ ಕುಮಾರ್, ಸಿದ್ದರಾಜು ಬೆಳ್ಳಯ್ಯ, ಬಿಸಿಎಂ. ಇಲಾಖೆ ಅಧಿಕಾರಿ ಪಿ.ಪಿ.ಕವಿತಾ, ವೃತ್ತ ನಿರೀಕ್ಷಕರಾದ ರಾಜು, ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್, ಸೀತಾಲಕ್ಷಿö್ಮ, ಸವಿತಾ ಕೀರ್ತನ್, ಮೋಹನ್ ಕುಮಾರ್ ಇತರರು ಇದ್ದರು. ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯ ವಿಶೇಷತೆ: ಕನ್ನಡ ಜ್ಯೋತಿ ರಥ ಯಾತ್ರೆಯ ವಾಹನದ ಮುಂಭಾಗದಲ್ಲಿ ಪ್ರಮುಖವಾಗಿ ತಾಯಿ ಭುವನೇಶ್ವರಿ ಮಾತೆ ಪ್ರತಿಮೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆ ಒಳಗೊಂಡಿದ್ದು ಎದ್ದು ಕಂಡಿತ್ತು. ತಾಯಿ ಭುವನೇಶ್ವರಿ ಬಳಿ ತಾಯಿ ಮಾತೆ ಕಾವೇರಿ ಪ್ರತಿಮೆ ಒಳಗೊಂಡ ಕೃಷ್ಣರಾಜ ಸಾಗರ ಅಣೆಕಟ್ಟು ಬರೆದಿದ್ದು ವಿಶೇಷವಾಗಿತ್ತು. ಜ್ಯೋತಿ ಹೊತ್ತ ರಥದ ಎಡ ಮತ್ತು ಬಲ ಬದಿಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟçಕವಿ ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ.ಕೃ.ಗೋಕಾಕ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ ಅವರ ಒಳಗೊಂಡ ಭಾವಚಿತ್ರ ಒಳಗೊಂಡಿದ್ದು ವಿಶೇಷವಾಗಿತ್ತು. ಹಾಗೆಯೇ ಜ್ಯೋತಿ ಹೊತ್ತ ರಥದ ಹಿಂಭಾಗದಲ್ಲಿ ಎತ್ತ್ತುಗಳ ಜೊತೆ ರೈತ ಉಳುಮೆ ಮಾಡುವ ದೃಶ್ಯ ಮನಮೋಹಕವಾಗಿತ್ತು. ಜೊತೆಗೆ ಕರ್ನಾಟಕ ರಾಜ್ಯದ ಲಾಂಛನ, ಮಧ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಲೋಗೋ ಒಳಗೊಂಡಿದ್ದು ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.