ಕೂಡಿಗೆ, ನ.11 NEWS DESK : ಬಾಣಾವರ ಸಮೀಪದ ಬೂವಂಗಾಲ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಹಾಡಹಗಲೇ ಕಾಡಾನೆಯೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಮುಂಜಾನೆ ಬಾಣಾವರ ಮುಖ್ಯ ರಸ್ತೆ, ಬೂವಂಗಾಲ ವ್ಯಾಪ್ತಿಯ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ಬಾಣಾವರ ಮೀಸಲು ಅರಣ್ಯ ವ್ಯಾಪ್ತಿಯಿಂದ ಕಾಡಾನೆಗಳು ರಸ್ತೆ ಬದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಹಾಲು ಹಾಕಲು ಪಕ್ಕದ ಗ್ರಾಮಕ್ಕೆ ತೆರಳುವ ಕಷ್ಟವಾಗಿದೆ ಎಂದು ಗ್ರಾಮಸ್ಥರಾದ ವಿವೇಕ, ಈರಪ್ಪ, ಮೋಹನ್ ತಿಳಿಸಿದ್ದಾರೆ. ಈಗಾಗಲೇ ಕಟಾವುಗೆ ಬಂದ ಭತ್ತದ ಬೆಳೆ, ಬಾಳೆ, ಗೆಣಸು ಸೇರಿದಂತೆ ಇತರೆ ಬೆಳೆಗಳನ್ನು ತಿಂದು ತುಳಿದು ಬಾರಿ ನಷ್ಟ ಪಡಿಸುತ್ತಿದ್ದು, ಅರಣ್ಯ ಇಲಾಖೆ ಕಾಡಾನೆ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.