ಮಡಿಕೇರಿ ನ.12 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಭಾಗಿತ್ವದಲ್ಲಿ ತೃತೀಯ ವರ್ಷದ ‘ವಿಪ್ರ ಕ್ರೀಡೋತ್ಸವ’ವನ್ನು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪ್ರ ಕ್ರೀಡೋತ್ಸವದ ಸಂಚಾಲಕರಾದ ಗೋಪಾಲಕೃಷ್ಣ ಅವರು, ಡಿ.1 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30 ಗಂಟೆಗೆ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಲಿದೆ.ಇದರಲ್ಲಿ ಪ್ರಮುಖವಾಗಿ ಪುರುಷರ ಸಿಂಗಲ್ಸ್ ಮತ್ತು ಡಬಲ್ಸ್, ಮಹಿಳೆಯರ ವಿಭಾಗದ ಸಿಂಗಲ್ಸ್ ಮತ್ತು ಡಬಲ್ಸ್ ಹಾಗೂ ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ಡಿ.8 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳುವ ತಂಡಗಳು ನ.30ರ ಒಳಗಾಗಿ ಬಿ.ಕೆ. ಜಗದೀಶ್ ಮೊ.9448206688, ಗೋಪಾಲಕೃಷ್ಣ ಮೊ.9448119993 ಇವರನ್ನು ಸಂಪರ್ಕಿಸಬಹು. ಅಂದು ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ನಡೆಯಲಿದೆ ಎಂದರು.
ತಾಲ್ಲೂಕು ಮಟ್ಟದ ಪಂದ್ಯಾವಳಿ :: ಜಿಲ್ಲಾ ಮಟ್ಟದ ಪಂದ್ಯಾವಳಿಗೂ ಪೂರ್ವಭಾವಿಯಾಗಿ ತಾಲ್ಲೂಕು ಮಟ್ಟದ ಪಂದ್ಯಾವಳಿಗಳನ್ನು ಆಯಾ ಸಂಘಗಳು ನಡೆಸಲಿವೆ. ನ.17 ರಂದು ಸೋಮವಾರಪೇಟೆ ಮತ್ತು ಕುಶಾಲನಗರಗಳಲ್ಲಿ, ಡಿ.1ರಂದು ಗೋಣಿಕೊಪ್ಪಲುವಿನಲ್ಲಿ ತಾಲ್ಲೂಕು ಮಟ್ಟದ ಪಂದ್ಯಾವಳಿ, ನ.24 ರಂದು ಮಡಿಕೆರಿ ತಾಲ್ಲೂಕಿನ ಒಳಾಂಗಣ ಸ್ಪರ್ಧೆಗಳು ಮಧ್ಯಾಹ್ನ ನಗರದ ಶ್ರೀ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ವಿರಾಜಪೇಟೆ ತಾಲ್ಲೂಕಿನ ಪಂದ್ಯಾವಳಿಯ ದಿನಾಂಕ ನಿಗದಿಯಾಗಬೇಕಿದೆಯಷ್ಟೆ ಎಂದು ತಿಳಿಸಿದರು. ತಾಲ್ಲೂಕು ಮಟ್ಟದಲ್ಲಿ ಪ್ರಮುಖವಾಗಿ ಚೆಸ್ ಮತ್ತು ಕೇರಂ ಪಂದ್ಯಗಳು ನಡೆಯಲಿವೆ. ಇವುಗಳ ವಿಜೇತರು ಡಿ.29 ರಂದು ಬೆಳಗ್ಗೆ ನಗರದ ಶ್ರೀ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆಯುವ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಚೆಸ್ ಮತ್ತು ಕೇರಂನೊಂದಿಗೆ ತಾಲ್ಲೂಕು ಮಟ್ಟದಲ್ಲಿ ಇತರೆ ಸ್ಪರ್ಧೆಗಳು ನಡೆಯಲಿರುವುದಾಗಿ ಹೇಳಿದರು.
ಸಮಾರೋಪ-ಪ್ರತಿಭಾ ಪುರಸ್ಕಾರ :: ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಮಾತನಾಡಿ, ವಿಪ್ರ ಕ್ರೀಡೋತ್ಸವದ ಸಮಾರೋಪ ಸಮಾರಂಭ ಡಿ.29 ರಂದು ನಗರದ ಶ್ರೀ ಲಕ್ಷೀನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಇದರಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ, ಐವರು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ನಡೆಯಲಿದೆಯೆಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ನಿಧಿಯ ಕಾರ್ಯದರ್ಶಿ ಬಿ.ಕೆ.ಜಗದೀಶ್, ಉಪಾಧ್ಯಕ್ಷ ರಾಜಶೇಖರ್, ನಿರ್ದೇಶಕರಾದ ಲಲಿತಾ ರಾಘವನ್ ಹಾಗೂ ಸದಸ್ಯ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.