ಮಡಿಕೇರಿ ನ.12 NEWS DESK : ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯಲ್ಲಿ ಸ್ವಚ್ಛತೆ, ಆಹಾರ ದಾಸ್ತಾನು ಉಗ್ರಾಣದಲ್ಲಿ ಇಲಿ, ಹೆಗ್ಗಣ ಸೇರದಂತೆ ಗಮನಹರಿಸುವುದು. ವೈಯಕ್ತಿಕ ಪರಿಸರ ಶುಚಿತ್ವ ಕಾಪಾಡುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಸುವುದು, ಆಹಾರ ತಯಾರಿಕೆ ವಿಧಾನ, ನೈರ್ಮಲ್ಯಕ್ಕೆ ಆದ್ಯತೆ ನೀಡುವುದು ಹೀಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತ ಅಧಿಕಾರಿ ಅನಿಲ್ ಧಾವನ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಕಾರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಲಯ ಪಾಲಕರು, ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳಿಗೆ ನಗರದ ಗಾಂಧಿ ಭವನದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಕುರಿತು ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ನಿಲಯಗಳಲ್ಲಿ ಕರ್ತವ್ಯ ನಿರ್ವಹಿಸುವವರು ದೈಹಿಕ ಶುಚಿತ್ವ ಮತ್ತು ಆರೋಗ್ಯದ ಕಡೆ ಗಮನಹರಿಸಬೇಕು. ತಯಾರಿಸಿದ ಆಹಾರವನ್ನು ಮುಚ್ಚಿಡುವುದು, ಕ್ರಿಮಿಕೀಟಗಳಿಂದ ಆಹಾರ ಕಲುಷಿತವಾಗದಂತೆ ಗಮನಹರಿಸುವುದು. ತಯಾರಿಸಿದ ಆಹಾರವನ್ನು ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಬಳಸುವುದು, ಪ್ಯಾಕ್ ಮಾಡಿದ ಆಹಾರ ವಸ್ತುಗಳ ಲೇಬಲ್‍ಗಳಲ್ಲಿ ಗ್ರಾಹಕರಿಗೆ ಅಗತ್ಯವಾಗಿ ನೀಡಲೇಬೇಕಾದ ಮಾಹಿತಿ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಅನಿಲ್ ಧಾವನ್ ಹೇಳಿದರು. ಕಚ್ಚಾ ವಸ್ತುಗಳು ಹಾಗೂ ಸಿದ್ಧ್ದಪಡಿಸಿದ ಆಹಾರವನ್ನು ಪ್ರತ್ಯೇಕವಾಗಿ ಶೇಖರಿಸುವುದು. ತ್ಯಾಜ್ಯ ವಸ್ತುಗಳನ್ನು ಸೂಕ್ತವಾಗಿ ಸಂಗ್ರಹಿಸಿ ಸಮರ್ಪಕವಾಗಿ ವಿಲೇವಾರಿ ಮಾಡುವುದು, ಶುದ್ಧ ಮತ್ತು ಸುರಕ್ಷಿತ ಗುಣಮಟ್ಟದ ಆಹಾರ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅವರು ವಿವರಿಸಿದರು. ಆಹಾರ ವಸ್ತು ತಯಾರಿಸುವವರು ಮತ್ತು ವಿತರಣೆ ಮಾಡುವವರು ಕೈಗಳನ್ನು ಸೋಪು, ಸೋಂಕು ನಿವಾರಣೆ ದ್ರಾವಣದಿಂದ ತೊಳೆಯುವುದು, ಕೈಗಳಿಗೆ ಗ್ಲೌಸ್, ಮುಖಕ್ಕೆ ಮಾಸ್ಕ್ ಮತ್ತು ತಲೆಗೆ ಕೂದಲುಗಳನ್ನು ಮುಚ್ಚುವಂತಿರುವ ಟೋಪಿ ಮತ್ತು ಕಾಲುಗಳಿಗೆ ಪಾದರಕ್ಷೆ ಧರಿಸುವುದು, ಕೈಗಳ ಉಗುರುಗಳನ್ನು ಮತ್ತು ತಲೆ ಕೂದಲುಗಳನ್ನು ನೀಟಾಗಿ ಕತ್ತರಿಸಬೇಕು ಎಂದು ಸಲಹೆ ನೀಡಿದರು. ಬಿಸಿಎಂ ಇಲಾಖೆಯ ಅಧಿಕಾರಿ ಪಿ.ಪಿ.ಕವಿತಾ ಅವರು ಮಾತನಾಡಿ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಚತೆಗೆ ಪ್ರಥಮ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶುಚಿತ್ವದ ಆಹಾರ ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಸಲಹೆ ನೀಡಿದರು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ವಿಭಾಗದ ಮಂಜುನಾಥ್, ಹಿಂದುಳಿದ ವರ್ಗಗಳ ಇಲಾಖೆಯ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್, ವ್ಯವಸ್ಥಾಪಕರಾದ ಶಿವಶಂಕರ, ಆರೋಗ್ಯ ಶಿಕ್ಷಣಾಧಿಕಾರಿ ಶ್ರೀನಾಥ್, ನಿಲಯ ಮೇಲ್ವಿಚಾರಕರಾದ ಶ್ರೀಕಾಂತ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಇತರರು ಇದ್ದರು.
Breaking News
- *ಯುವನಿಧಿ ಯೋಜನೆ ಹೆಸರು ನೋಂದಣಿಗೆ ಮನವಿ*
- *ಮಡಿಕೇರಿಯಲ್ಲಿ ಸಹಕಾರ ಸಪ್ತಾಹ : ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಶ್ರಮಿಸಿ : ಎಂ.ಸಿ.ನಾಣಯ್ಯ ಸಲಹೆ*
- *ಗೋಣಿಕೊಪ್ಪಲಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*
- *ಶ್ರೀ ಕೇತ್ರ ಧರ್ಮಸ್ಥಳದಿಂದ ಕೊಡಗಿನ ಸರ್ಕಾರಿ ಶಾಲೆಗಳಿಗೆ 72 ಲಕ್ಷ ಮೌಲ್ಯದ ಡೆಸ್ಕ್- ಬೆಂಚು ವಿತರಣೆ*
- *ಪೊನ್ನಂಪೇಟೆ : ಕೂರ್ಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ “ಅವಿನ್ಯಂ” ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ*
- *ವಿಹೆಚ್ಪಿಯಿಂದ ನ.15 ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ*
- *ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಗೋಣಿಕೊಪ್ಪಲಿನಲ್ಲಿ ಏಡ್ಸ್ ಕುರಿತು ಜಾಗೃತಿ : ಜಾಗೃತಿಯಿಂದ ಮಾತ್ರ ಏಡ್ಸ್ ತಡೆಗಟ್ಟಲು ಸಾಧ್ಯ : ಡಾ. ಎಂ.ಬಿ.ಕಾವೇರಿಯಪ್ಪ*
- *ಕಾಂಗ್ರೆಸ್ ಆರೋಪದಲ್ಲಿ ಸತ್ಯಾಂಶಗಳಿಲ್ಲ : ಕೊಡಗು ಬಿಜೆಪಿ ಅಸಮಾಧಾನ*
- *ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ*