ಮಡಿಕೇರಿ NEWS DESK ನ.12 : ಕೋಲಾರದಲ್ಲಿ ನಡೆದ ಹದಿನೇಳು ವರ್ಷದೊಳಗಿನ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ 4*400 ರಿಲೇ ಸ್ಪರ್ಧೆಯಲ್ಲಿ ಕೂಡಿಗೆ ಕ್ರೀಡಾಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಭವಿಷ್ಯ ಡಿ.ಕೆ ನೇತೃತ್ವದ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದೆ. ನ.26ರಿಂದ ಡಿ.1 ರವರೆಗೆ ಉತ್ತರಪ್ರದೇಶದ ಲಕ್ನೋದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆ ನಡೆಯಲಿದೆ. ದೈಹಿಕ ಶಿಕ್ಷಕ ಮಂಜುನಾಥ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಭವಿಷ್ಯ ಡಿ.ಕೆ ಮುತ್ತಾರುಮುಡಿಯ ದೇರಾಜೆ ಮನೆಯ ಕಿರಣ್ ಹಾಗೂ ಗೀತಾ ದಂಪತಿಯ ಪುತ್ರಿ. ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಭವಿಷ್ಯ ಡಿ.ಕೆ ಹಾಗೂ ತಂಡವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸನ್ಮಾನಿಸಿ, ಅಭಿನಂದಿಸಿದರು. ರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸುವಂತೆ ಶುಭ ಹಾರೈಸಿದರು. ಈ ಸಂಧರ್ಭ ಫೀ.ಮಾ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೋಹನ್ ವಿ.ಜಿ ಗೌಡ, ಪ್ರಮುಖರಾದ ಕವನ್ ಕೊತ್ತೋಳಿ, ದಿನೇಶ್ ಶೆಟ್ಟಿ, ಹರಿಪ್ರಸಾದ್ ಕೋಚನ ಉಪಸ್ಥಿತರಿದ್ದರು.











