ನಾಪೋಕ್ಲು ನ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ-ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಹಯೋಗದಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಅರೆಭಾಷೆ ಗಡಿನಾಡ ಉತ್ಸವ-2024 ದ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟದ ಪುರುಷರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಬಲಮುರಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಕೆದಮುಳ್ಳೂರು ತಂಡ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಲಮುರಿ ಚಾಂಪಿಯನ್ ಆದರೆ, ನರಿಯಂದಡ ಬೆಡಗಿಯರ ತಂಡ ರನ್ನರ್ಸ್ ಸ್ಥಾನಕ್ಕೆ ಭಾಜನರಾದರು. ಪುರುಷರ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ನಿಡ್ಯಮಲೆ ಮುರಳಿ, ಪೊಕ್ಕೋಳಂಡ್ರ ತನು ಹಾಗೂ ಮರದಾಳು ಪವನ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪೊಕ್ಕೋಳಂಡ್ರ ತ್ರಿಶಾ, ಮಂಜಿರ ಸಹನ, ಕುಟ್ಟನ ತಶ್ವಿತಾ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವುದು, 50 ಮೀಟರ್ ಓಟ, 100ಮೀಟರ್ ಓಟ, ಯುವಕರಿಗೆ ಭಾರದ ಗುಂಡು ಎಸೆತ, 60ವರ್ಷ ಮೇಲ್ಪಟ್ಟ ವರಿಗೆ 75 ಮೀಟರ್ ಓಟ, ಬಾಲಕ ಬಾಲಕಿಯರಿಗೆ 200 ಮೀಟರ್ ಓಟ, ಮಹಿಳೆಯರಿಗೆ ಪಾಸ್ ಇನ್‍ದ ಬಾಲ್, ಪುರುಷರಿಗೆ ಬಾಂಬ್ ಇನ್ ದ ಸಿಟಿ, ಗ್ರಾಮೀಣ ಮಹಿಳೆಯರಿಗೆ ಶೋಭಾನೆ ಹೇಳುವ ಸ್ವರ್ದೆ ನಡೆದವು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ವೇದಿಕೆಯಲ್ಲಿದ್ದ ಪಾರಾಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ, ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಹರಿಪ್ರಸಾದ್ ಬೆಳಿಯಂಡ್ರ, ಮೈಸೂರು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಚೆಯ್ಯಂಡಾಣೆ ಸ.ಹಿ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಕುಮಾರಿ, ಕೆದಮುಳ್ಳೂರು ಗ್ರಾ.ಪಂ ಮಾಜಿ ಸದಸ್ಯ ಗೌಡುಧಾರೆ ಚೋಟು ಬಿದ್ದಪ್ಪ ಮತ್ತಿತರರು ಬಹುಮಾನ ವಿತರಿಸಿ ಶುಭ ಹಾರೈಸಿದರು.
ವರದಿ : ದುಗ್ಗಳ ಸದಾನಂದ