ಚೆಟ್ಟಳ್ಳಿ ನ.13 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿಯಮಿತ, ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ಮಡಿಕೇರಿ ಸಹಕಾರ ಇಲಾಖೆ, ಕೊಡಗು ಜಿಲ್ಲೆ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ನ.14 ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ ಹಾಗೂ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವ ದಿನಾಚರಣೆ ನಡೆಯಲಿದೆ. ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿಯ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ವಹಿಸಲಿದ್ದಾರೆ. ಚೆಟ್ಟಳ್ಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷ ಬಿದ್ದಂಡ ಎ. ಅಚ್ಚಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿಯ ನಿರ್ದೇಶಕ ಎಂ.ಎನ್. ಉಮೇಶ್ ಉತ್ತಪ್ಪ ಹಿರಿಯ ಸಹಕಾರಿಗಳಿಗೆ ಸನ್ಮಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಪಿ.ಸಿ.ಮನು ರಾಮಚಂದ್ರ, ನಿರ್ದೇಶಕರಾದ ಬಿ.ಎ.ರಮೇಶ್ ಚಂಗಪ್ಪ, ಎನ್.ಎ.ರವಿ ಬಸಪ್ಪ, ಪಿ.ಸಿ.ಅಚ್ಚಯ್ಯ, ಪಿ.ಬಿ.ಯತೀಶ್, ಜಲಜಾ ಶೇಖರ್, ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್.ವಿಜಯ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಚೆಟ್ಟಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪೇರಿಯನ ಎಸ್. ಪೂಣಚ್ಚ ಪಾಲ್ಗೊಳ್ಳಲಿದ್ದಾರೆ. ಕೆ.ಐ.ಸಿ.ಎಂ. ಮಡಿಕೇರಿಯ ಪಾಂಶುಪಾಲರಾದ ಡಾ.ಆರ್.ಎಸ್.ರೇಣುಕಾ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಸನ್ಮಾನಿಸಿ ಗಳನ್ನು ಸನ್ಮಾನಿಸಿ, ಗೌರವಿಸಲಾಗುವುದು.