ಕುಣಿಗಲ್ NEWS DESK ನ.13 : ಟಯರ್ ಸ್ಫೋಟಗೊಂಡು ಕಾರು ಪಲ್ಟಿಯಾದ ಪರಿಣಾಮ ಐಟಿ ಉದ್ಯೋಗಿ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ, ರಾಜೇಂದ್ರಪುರ ಗ್ರಾಮದಲ್ಲಿ ನಡೆದಿದೆ. ಮಂಡ್ಯ ನಿವಾಸಿ, ಐಟಿ ಉದ್ಯೋಗಿ ಆಕರ್ಶ್ (28) ಮೃತ ದುರ್ದೈವಿ. ಮೂವರು ಗಾಯಾಳುಗಳು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ಮಂಡ್ಯಕ್ಕೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.









