ಮಡಿಕೇರಿ ನ.14 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಇಲಾಖೆ, ಮೇಕೆರಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಮೇಕೇರಿ ಅಂಗನವಾಡಿಯಲ್ಲಿ ಮೂರ್ನಾಡು ವೃತ್ತಕ್ಕೆ ಸೇರಿದ ಸಹಾಯಕಿಯರಿಗೆ ಮತ್ತು ಮೇಕೆರಿ ಗ್ರಾಮದ ಮಹಿಳೆಯರಿಗೆ ಆರೋಗ್ಯ ತಪಾಸಣೆ, ಬಿಪಿ, ಶುಗರ್ ತಪಾಸಣೆ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ ಆಹಾರ, ಆರೋಗ್ಯ, ಸ್ವಚ್ಛತೆ, ಇಲಾಖೆ ಯೋಚನೆಗಳು, ಮಮತೆಯ ತೊಟ್ಟಿಲು, ಮಡಿಲು ಯೋಜನೆಗಳ ಬಗ್ಗೆ ತಿಳಿಸಿದರು. ಮಾದರಿ ಅಂಗನವಾಡಿ ಕೇಂದ್ರಕ್ಕೆ ಗ್ರಾಮ ಪಂಚಾಯಿತಿ ಮತ್ತು ಯುವಕ ಸಂಘದವರ ಸಮುದಾಯದ ಸಹಕಾರವನ್ನು ನೀಡುವಂತೆ ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷಾ, ಜಯಶ್ರೀ, ಕಿರಣ್ ದತ್ತು ಮಾಸಾಚರಣೆ ಬಗ್ಗೆ ಮಾಹಿತಿ ನೀಡಿದರು.
ಪೋಶನ್ ಅಭಿಯಾನ ಕುರಿತು ಜಿಲ್ಲಾ ಸಂಯೋಜಕ ನಿತಿನ್ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸುಶೀಲ ಮಕ್ಕಳಿಗೆ ಸಿಹಿ ವಿತರಣೆ ಮಾಡಿದರು. ಸಿಎಚ್ಒ ನಮ್ರುತಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಮೇಕೇರಿ ಶಾಲಾ ಮುಖ್ಯೋಪಾಧ್ಯಾಯರು ಸವಿತಾ, ಶಾಲಾ ಶಿಕ್ಷಕರಾದ ಲಾವಣ್ಯ, ಯುವಕ ಸಂಘದ ಸದಸ್ಯರಾದ ಶ್ರೇಯಸ್, ಆಶಾ ಕಾರ್ಯಕರ್ತೆ ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಹೇಮಾ ಕಾರ್ಯಕ್ರಮದ ಆಯೋಜನೆ ಮಾಡಿ ನಿರೂಪಣೆ ಮಾಡಿದರು. ಅಂಗನವಾಡಿ ಮಕ್ಕಳಿಂದ ನೃತ್ಯ, ಹಾಡು, ಚದ್ಮ ವೇಷ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ಮಾಡಲಾಯಿತು.