ನಾಪೋಕ್ಲು ನ.14 NEWS DESK : ಅಂಗಾಂಗಗಳನ್ನು ದಾನ ಮಾಡುವುದರಿಂದ ಒಬ್ಬ ವ್ಯಕ್ತಿಯ ಜೀವ ಉಳಿಸಬಹುದು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಸಹ ಪ್ರಾಧ್ಯಾಪಕ ಡಾ.ಶಶಾಂಕ್ ಹೇಳಿದರು. ನಾಪೋಕ್ಲು ಮಹಿಳಾ ಸಮಾಜ, ನಾಪೋಕ್ಲು ಲಯನ್ಸ್ ಕ್ಲಬ್ ಮತ್ತು ಲಿಯೊ ಕ್ಲಬ್ ಸಹೋಗಲದಲ್ಲಿ ನಾಪೋಕ್ಲು ಮಹಿಳಾ ಸಮಾಜದಲ್ಲಿ ನಡೆದ ದೇಹ ಮತ್ತು ಅಂಗಾಂಗ ದಾನದ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಆರೋಗ್ಯವಂತ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಬಹುದು. ಹೃದಯ ಸೇರಿದಂತೆ ದೇಹದ ವಿವಿಧ ಅಂಗಗಳನ್ನು ದಾನ ಮಾಡಲು ಸಾಧ್ಯವಿದೆ. ಇದಕ್ಕಾಗಿ ನೋಂದಣಿ ಮಾಡಬೇಕು. ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸುತ್ತದೆ. ಅಂಗಾಂಗ ದಾನ ಮಾಡುವ ಮಂದಿ ವೈದ್ಯರ ಸಹಕಾರದಿಂದ ವ್ಯಕ್ತಿಗಳ ಜೀವ ಉಳಿಸಲು ಸಾಧ್ಯ ಎಂದು ಹೇಳಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಮೇರಿಚಿಟ್ಟಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ಮಹಿಳಾ ಸಮಾಜದ ಅಧ್ಯಕ್ಷ ರೇಷ್ಮಾ ಉತ್ತಪ್ಪ, ಭಗವತಿ ಮಹಿಳಾ ಸಮಾಜದ ಅಧ್ಯಕ್ಷ ಬೊಳ್ಳಮ್ಮ ನಾಣಯ್ಯ, ಗಾಯತ್ರಿ ಸಂಘದ ಅಧ್ಯಕ್ಷ ಧರಣಿ ಗಣಪತಿ, ಗ್ರಾ.ಪಂ ಉಪಾಧ್ಯಕ್ಷ ಹೇಮಾ ಅರುಣ್, ಲಯನ್ಸ್ ಕ್ಲಬ್ ಖಜಾಂಚಿ ರೇಖಾ ಪೊನ್ನಣ್ಣ ಹಾಜರಿದ್ದು, ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಹಾಗೂ ಮಹಿಳಾ ಸಮಾಜ, ಗಾಯತ್ರಿ ಸಂಘ, ಭಗವತಿ ಮಹಿಳಾ ಸಮಾಜದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.