ನಾಪೋಕ್ಲು ನ.15 NEWS DESK : ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಕ್ಕಳಿಗೆ ಆಟೋಟಗಳು ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಹಾಡು, ನೃತ್ಯ, ಛದ್ಮವೇಷ ಪ್ರದರ್ಶಿಸಿ ಸಂಭ್ರಮಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಾಲಾಲ್ ನೆಹರು ಅವರ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು. ಶಿಕ್ಷಕಿ ಎಂ.ಬಿ ಭಾಗೀರಥಿ ಮಾತನಾಡಿ, ನೆಹರು ಅವರಿಗೆ ಮಕ್ಕಳೆಂದರೆ ಬಹಳ ಮಮತೆ. ಈ ಹಿನ್ನೆಲೆಯಲ್ಲಿ ಅವರ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಶಾಲಾ ನಾಯಕಿ ವಿಶಾಲಾಕ್ಷಿ ದಿನದ ಮಹತ್ವದ ಕುರಿತು ಮಾತನಾಡಿದರು. ಶಾಲಾ ಸಾಂಸ್ಕೃತಿಕ ನಾಯಕಿ ಬಿ.ಬಿ.ಶ್ರೀಶಾನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ನಾಯಕರುಗಳಾದ ಬಿ.ಬಿ.ತ್ರಿಶಾನ, ಕೆ.ಆಕಾಶ್, ಪಿ.ಎಂ.ದೇವಯ್ಯ, ಡಿ.ಪಿ.ಕೃಪಾ, ಟಿ.ಎಂ.ನಂಜಪ್ಪ ಹಾಜರಿದ್ದರು. ಕಿರೀಟ್ ಸೋಮಯ್ಯ ವಂದಿಸಿದರು.
ವರದಿ : ದುಗ್ಗಳ ಸದಾನಂದ.