ಮಡಿಕೇರಿ ನ.15 NEWS DESK : ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಪದಕ ಗೆದ್ದ ಕೊಡಗು ಮರ್ಕರ ಟೆಕ್ವಾಂಡೋ ಕ್ಲಬ್‍ನ ವಿದ್ಯಾರ್ಥಿಗಳು ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಮಿಶಾಲ್, ಸಂತ ಜೊಸೆಫರ ಶಾಲೆಯ ವಿರಾಟ್, ವಿರಾಂಜನ್, ಅನಿಯ ಪರ್ವಿನ್ ಹಾಗೂ ಸಂತ ಮೈಕಲರ ಶಾಲೆಯ ಆರೂಷ್ ಪರ್ವಿನ್, ಕೊಡಗು ವಿದ್ಯಾಲಯ ಶಾಲೆಯ ಪಾವನಿ, ಹರ್ಷ್ ಕರುಂಬಯ್ಯ, ಹೋಂ ಸ್ಕೂಲ್‍ನ ಅನನ್ಯ ಆಯ್ಕೆಯಾಗಿದ್ದಾರೆ. ಇವರು ಕರ್ನಾಟಕ ಒಲಿಂಪಿಕ್ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಒಳಂಗಾಣ ಕ್ರೀಡಾಂಗಣದಲ್ಲಿ ನ.20ರ ವರೆಗೆ ನಡೆಯಲಿರುವ ಮಿನಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕೊಡಗನ್ನು ಪ್ರತಿನಿಧಿಸಲಿದ್ದಾರೆ. ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇತರ ಸಚಿವರು ಪಾಲ್ಗೊಳ್ಳಲಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ಎಲ್ಲಾ ಕ್ರೀಡಾ ಸೌಲಭ್ಯಗಳು ದೊರೆಯಲಿದೆ ಎಂದು ಟೆಕ್ವಾಂಡೋ ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ತಿಳಿಸಿದ್ದಾರೆ.