ಮಡಿಕೇರಿ NEWS DESK ನ.15 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕೆ ಗ್ರಾಮದಲ್ಲಿ ನಡೆದಿದ್ದ ಮನೆ ಕಳವು ಪ್ರಕರಣವನ್ನು ಬೇಧಿಸಿರುವ ಕುಶಾಲನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹಕ್ಕೆ ಗ್ರಾಮದ ನಿವಾಸಿ ಸೋಮಶೇಖರ್.ಎಸ್.ಕೆ(24) ಹಾಗೂ ಹೊಳೆನರಸೀಪುರ ತಾಲ್ಲೂಕಿನ ಮಾಚಗೌಡನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ್.ಎನ್(24) ಬಂಧಿತ ಆರೋಪಿಗಳು. ಬಂಧಿತರಿಂದ 168.02 ಗ್ರಾಂ ಚಿನ್ನಾಭರಣ, ರೂ.2.54 ಲಕ್ಷ ನಗದು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಕಬ್ಬಿಣದ ಹಾರೆಯನ್ನು ವಶಪಡಿಸಿಕೊಳ್ಳಲಾಗಿದೆ. ಹಕ್ಕೆ ಗ್ರಾಮದ ನಿವಾಸಿ ದೇವರಾಜು ಎಂಬುವವರು ನ.3ರಂದು ದೀಪವಾಳಿ ಹಬ್ಬದ ಪ್ರಯುಕ್ತ ಸಂಬಂಧಿಕರ ಮನೆಗೆ ತೆರಳಿದ್ದರು. ಮರಳಿ ಮನೆಗೆ ಬಂದು ನೋಡಿದಾಗ ಅಪರಿಚಿತ ವ್ಯಕ್ತಿಗಳು ಮನೆಯ ಹಿಂದಿನ ಬಾಗಿಲನ್ನು ಮುರಿದು ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವುದು ಗೋಚರಿಸಿದೆ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್.ಕೆ, ಗ್ರಾಮಾಂತರ ಠಾಣಾಧಿಕಾರಿ ಮೋಹನ್ ರಾಜು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಕಳವು ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಸ್ವತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘಿಸಿದ್ದಾರೆ.
Breaking News
- *ಕುಶಾಲನಗರ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ*
- *ನ.17 ರಂದು ಎಲ್ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯಲ್ಲಿ ಚಿತ್ರಕಲಾ ಸ್ಪರ್ಧೆ*
- *ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಕೊಡಗು ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು ಆಯ್ಕೆ*
- *ಅರೆಕಾಡಿನಲ್ಲಿ ಗಮನ ಸೆಳೆದ ‘ನಾಡೊರ್ಮೆ’ ಕಾರ್ಯಕ್ರಮ : ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಮತ್ತಷ್ಟು ಶ್ರಮಿಸಿ : ಶಾಸಕ ಡಾ.ಮಂತರ್ ಗೌಡ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ : ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ : ಎಸ್ಪಿ ಕೆ.ರಾಮರಾಜನ್*
- *”ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣ : ಸಂಸದ ಯದುವೀರ್ ಭರವಸೆ*
- *ಹಾಕತ್ತೂರು, ಮೇಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಂಸದ ಯದುವೀರ್*
- *ನ.26 ರಂದು ಸಿಎನ್‌ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನಾಪೋಕ್ಲು : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*