ಮಡಿಕೇರಿ ನ.16 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ರೂಢಿ ಸಂಪ್ರದಾಯದಂತೆ ದೇವಾಲಯ ಮುಂಭಾಗದ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಪುಷ್ಪಾಲಂಕೃತ ತೆಪ್ಪದ ಮೇಲೆ ಬೆಳ್ಳಿ ಮೂರ್ತಿಯನ್ನು ಕೂರಿಸಿ ತೆಪ್ಪೋತ್ಸವ ಮಾಡಲಾಯಿತು. ಇದಕ್ಕೂ ಮೊದಲು ದೇವಾಲಯದಲ್ಲಿ ವಿವಿಧ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು. ಪಲ್ಲಕ್ಕಿಯಲ್ಲಿ ಕೂರಿಸಿ ದೇವಾಲಯದ ಆವರಣದಲ್ಲೇ ಪಲ್ಲಕ್ಕಿ ಉತ್ಸವ ಮಾಡಲಾಯಿತು. ನಂತರ ಅದೇ ಪಲ್ಲಕ್ಕಿಯಲ್ಲಿ ಈಶ್ವರನ್ನು ಕರೆತಂದು ತೆಪ್ಪದಲ್ಲಿ ಕೂರಿಸಿ ಕಲ್ಯಾಣಿಯಲ್ಲಿ ಉತ್ಸವ ಮಾಡಲಾಯಿತು. ಬೃಹತ್ ಕಲ್ಯಾಣಿಯಲ್ಲಿ ಮೂರು ಸುತ್ತು ತೆಪ್ಪೋತ್ಸವ ಮಾಡಲಾಯಿತು. ವರ್ಷಕ್ಕೊಮ್ಮೆ ನಡೆಯುವ ಈ ತೆಪ್ಪೋತ್ಸವಕ್ಕೆ ನೂರಾರು ಭಕ್ತರು ಆಗಮಿಸಿ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು.