ಮಡಿಕೇರಿ NEWS DESK ನ.16 : ಕೊಡಗು ಚೆಸ್ಕಾಂನಲ್ಲಿ ಖಾಲಿ ಇರುವ ಅಧಿಕಾರಿಗಳು ಹಾಗೂ ಲೈನ್ ಮೆನ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನಲ್ಲಿ ಖಾಲಿ ಇರುವ ಲೈನ್ ಮೆನ್‌ಗಳ ಹುದ್ದೆ ಭರ್ತಿ ಮಾಡುವ ಸಂದರ್ಭ ರಾಜ್ಯದ ವಿವಿಧ ಭಾಗಗಳಿಂದ ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ. ಆ ಬಳಿಕ ಕೆಲವೇ ವರ್ಷಗಳಲ್ಲಿ ಅಧಿಕಾರಿಗಳ ಸಹಿತ ಲೈನ್‌ಮೆನ್‌ಗಳು ವರ್ಗಾವಣೆ ಪಡೆದು ಬೇರೆಡೆಗಳಿಗೆ ತೆರಳುತ್ತಾರೆ. ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಗ್ರಾಮೀಣ ಭಾಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕೂಡ ಕ್ರಮ ವಹಿಸಲಾಗುತ್ತದೆ. ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಮನೆಗಳಿಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಕಾಫಿ ಬೆಳೆಗಾರರಿಗೆ 10 ಹೆಚ್.ಪಿ. ಮೋಟಾರ್ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ಸಂಬಂಧ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು. ಜಿಲ್ಲೆಯ ಶಾಸಕರುಗಳ ಬೇಡಿಕೆಗೆ ಅನುಗುಣವಾಗಿ ಕೆಲವೆಡೆ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಜಾರ್ಜ್ ನುಡಿದರು.
ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ ಹುದಿಕೇರಿ, ಮೂರ್ನಾಡು, ಬಾಳೆಲೆ ಸಿದ್ದಾಪುರದಲ್ಲಿ ತಲಾ ಒಂದೊಂದು 66/11 ಕೆವಿ ವಿದ್ಯುತ್ ಉಪ ಕೇಂದ್ರಗಳ ನಿರ್ಮಾಣಕ್ಕೆ 112 ಕೋಟಿ ರೂ.ಗಳ ಟೆಂಡರ್ ಕರೆಯಲಾಗಿದೆ. ಕಾಟಕೇರಿಯಲ್ಲಿ ಒಂದು ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಜಿಲ್ಲಾಧಿಕಾರಿಗಳು ಜಾಗ ಗುರುತಿಸಿದ್ದಾರೆ. ಕೊಳಕೇರಿಯಲ್ಲೂ ವಿದ್ಯುತ್ ಉಪಕೇಂದ್ರಕ್ಕೆ ಜಾಗ ಗುರುತು ಮಾಡಲಾಗಿದೆ. ಮೂರ್ನಾಡು ಹಾಗೂ ಮರಗೋಡಿನಲ್ಲೂ ಖಾಸಗಿಯಾಗಿ ಜಾಗ ಖರೀದಿಸಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಸಬ್ ಸ್ಟೇಷನ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಗತವಾದರೆ ಕೊಡಗು ವಿದ್ಯುತ್ ಸಮಸ್ಯೆ ತಲೆದೋರುವುದಿಲ್ಲ ಎಂದು ಪೊನ್ನಣ್ಣ ಹೇಳಿದರು. ಸಂಪಾಜೆಯಿಂದ ಭಾಗಮಂಡಲಕ್ಕೆ ನೂತನವಾಗಿ 66 ಕೆ.ವಿ ವಿದ್ಯುತ್ ಮಾರ್ಗ ಅಳವಡಿಸುವ ಸಂಬಂಧ ಅರಣ್ಯ ಇಲಾಖೆಯ ಕಾನೂನು ತೊಡಕುಗಳಿವೆ. ವಿದ್ಯುತ್ ಲೈನ್ ಅರಣ್ಯ ಪ್ರದೇಶದ ಮೂಲಕ ಹಾದು ಹೋಗಲಿರುವ ಕಾರಣ ಅರಣ್ಯ ಇಲಾಖೆ ಅನುಮತಿಸಬೇಕಾಗಿದೆ. ಈ ನಿಟ್ಟಿನಲ್ಲೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ವಿದ್ಯುತ್ ಉಪಕೇಂದ್ರಗಳ ನಿರ್ಮಾಣ, ಲೈನ್‌ಗಳ ಬದಲಾವಣೆ, ಲೈನ್‌ಗಳ ಸಾಮರ್ಥ್ಯ ಹೆಚ್ಚಳ, ನಿರ್ವಹಣೆ, ಕೆಲವೆಡೆ ಯು.ಜಿ ಕೇಬಲ್‌ಗಳ ಅಳವಡಿಕೆ ಮತ್ತಿತ್ತರ ಕಾಮಗಾರಿಗಳಿಗೆ ಒಟ್ಟು 208 ಕೋಟಿ ರೂ.ಗಳಿಗೆ ಅನುಮೋದನೆ ದೊರೆತಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿಕ್ಷೇತ್ರ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತ್ತರರು ಉಪಸ್ಥಿತರಿದ್ದರು.
Breaking News
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*
- *ವಿರಾಜಪೇಟೆ : ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ ಉಪನ್ಯಾಸ ಕಾರ್ಯಕ್ರಮ*
- *ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
- *ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ನೂತನ ಪದಾಧಿಕಾರಿಗಳ ನೇಮಕ : ಜಿಲ್ಲಾಧ್ಯಕ್ಷರಾಗಿ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆ*
- *ವಾರ ಭವಿಷ್ಯ : ಯಾರಿಗೆ ಈ ವಾರ ಶುಭ… : ನ.18 ರಿಂದ 24ರ ವರೆಗೆ*
- *ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
- *ಭಾಗಮಂಡಲದಲ್ಲಿ ಕಾವೇರಿ ಆರತಿ*
- *ಬೊಳ್ಳಮ್ಮಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ*