ಮಡಿಕೇರಿ NEWS DESK ನ.17 : ಪುಟ್ಟ ಮಕ್ಕಳಲ್ಲಿ ಭಾರತ ದೇಶದ ಭವಿಷ್ಯವನ್ನು ಕಂಡ ಮಹಾನ್ ನೇತಾರ, ಮುತ್ಸದಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಬಣ್ಣಿಸಿದ್ದಾರೆ. ಮಡಿಕೇರಿಯ ಹಿಂದೂಸ್ತಾನಿ ಶಾಲೆಯ ಅಂಗನವಾಡಿಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನೆಹರೂ ಅವರು ದೂರದೃಷ್ಟಿಯುಳ್ಳ ನಾಯಕರಾಗಿದ್ದು, ಸ್ವಾತಂತ್ರ್ಯ ಪಡೆದ ಸಮಯದಲ್ಲಿ ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದರು. ಮಕ್ಕಳ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಮಹತ್ವ ನೀಡಿ ಹಲವು ಯೋಜನೆಗಳನ್ನು ರೂಪಿಸಿದ ಪರಿಣಾಮ ದೇಶದ ಅಭಿವೃದ್ಧಿ ಸಾಧ್ಯವಾಯಿತು ಎಂದರು. ಮಕ್ಕಳ ಬಗ್ಗೆ ನೆಹರು ಅವರಿಗೆ ಇದ್ದ ಅತೀ ಕಾಳಜಿಯನ್ನು ಗಮನಿಸಿ ದೇಶ ಅವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆ ಎಂದು ಆಚರಿಸುವ ಮೂಲಕ ಗೌರವಿಸುತ್ತಿದೆ. ಇಂತಹ ಗೌರವ ಜಗತ್ತಿನ ಯಾವ ನಾಯಕರಿಗೂ ಲಭಿಸಿಲ್ಲ. ನೆಹರು ಅವರ ಆದರ್ಶಗಳನ್ನು ಮಕ್ಕಳಿಗೆ ಮನದಟ್ಟು ಮಾಡುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.
ಅಂಗನವಾಡಿ ಆಹಾರ ರಾಜ್ಯಾದ್ಯಂತ ಏಕ ಪ್ರಕಾರವಾಗಿದ್ದು ಪ್ರಸ್ತುತ ನೀಡುತ್ತಿರುವ ಆಹಾರ ಇಲ್ಲಿನ ಮಕ್ಕಳಿಗೆ ಸೇರುತ್ತಿಲ್ಲ ಎಂಬ ಪೋಷಕರ ಮನವಿಗೆ ಉತ್ತರಿಸಿದ ತೆನ್ನಿರ ಮೈನಾ ಅವರು, ಈ ವಿಚಾರವನ್ನು ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಗಮನಕ್ಕೆ ತಂದು ಪ್ರಾದೇಶಿಕವಾಗಿ ಬಳಕೆ ಮಾಡುವ ಆಹಾರ ವಿತರಣೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಉದ್ಯಮಿ ಕಲೀಲ್ ಬಾಷ ಅಂಗನವಾಡಿಯ ಮಕ್ಕಳು ವಿದ್ಯೆಯ ಜೊತೆ ಉತ್ತಮ ಸಂಸ್ಕಾರವನ್ನು ಕಲಿಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತೋರ್ವ ಅತಿಥಿ ಸ್ಥಳೀಯ ಯುವ ಮುಖಂಡ ರವೂಫ್ ಶೇಖ್ ಮಾತನಾಡಿ ಈ ಅಂಗನವಾಡಿಯ ಅಭಿವೃದ್ದಿಗೆ ಶಾಸಕ ಡಾ.ಮಂತರ್ ಗೌಡ ಅವರು ಅನುದಾನದ ಭರವಸೆ ನೀಡಿದ್ದು, ಸದ್ಯದಲ್ಲಿಯೇ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು.
::: ಛದ್ಮವೇಷದಲ್ಲಿ ಮಿಂಚಿದ ಮಕ್ಕಳು ::: ಅಂಗನವಾಡಿ ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧಿ, ಡಾಕ್ಟರ್, ಕಿತ್ತೂರ ರಾಣಿ ಚೆನ್ನಮ್ಮ, ಕೊಡಗಿನ ಬೆಡಗಿ, ನ್ಯೂಸ್ ಪೇಪರ್ ಗರ್ಲ್ ಸೇರಿದಂತೆ ವಿವಿಧ ವೇಷಗಳಲ್ಲಿ ಮಿಂಚಿ ಸಂಭ್ರಮಿಸಿದರು.
ಕೆ.ನಿಡುಗಣೆ ಗ್ರಾಮ ಪಂಚಾಯತ್ ಸದಸ್ಯ ಜಾನ್ಸನ್ ಪಿಂಟೋ, ಸ್ಥಳೀಯ ಪ್ರಮುಖರಾದ ಮೀನಾಕ್ಷಿ, ಪೂರ್ಣಿಮಾ ವಿಮಲ ರೈ, ರಮೀಝಾ ಸೇರಿದಂತೆ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಸುಮತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Breaking News
- *ಗುಡ್ಡೆಹೊಸೂರು : ರಾಷ್ಟ್ರೀಕೃತ ಬ್ಯಾಂಕ್ ಮಾದರಿಯ ಡಿಜಿಟಲೀಕರಣ ವ್ಯವಸ್ಥೆ ಸಹಕಾರಿ ಕ್ಷೇತ್ರದ ಬ್ಯಾಂಕಿಂಗ್ ನಲ್ಲೂ ಅತ್ಯಗತ್ಯ : ಎಂ.ಎಂ.ಶ್ಯಾಮಲ*
- *ರಾಷ್ಟ್ರೀಯ ಸಬ್ ಜೂನಿಯರ್ ಮಹಿಳಾ ಹಾಕಿ ತಂಡದ ಸೆಂಟರ್ ಫಾರ್ವರ್ಡ್ ಆಗಿ ಮಡಿಕೇರಿಯ ಅಕ್ಷರ*
- *ಸೋಮವಾರಪೇಟೆ : ಅಪ್ಪು ಅಭಿಮಾನಿಗಳ ಬಳಗದಿಂದ ಸಂಭ್ರಮದ ಮಕ್ಕಳ ದಿನಾಚರಣೆ : ಹಲವು ಸಾಧಕರಿಗೆ ಸನ್ಮಾನ*
- *ನಿಧನ ಸುದ್ದಿ*
- *ಮಡಿಕೇರಿ ಅಂಗನವಾಡಿಯಲ್ಲಿ ಬಾಲಮೇಳದಲ್ಲಿ ಮಿಂಚಿದ ಪುಟಾಣಿಗಳು*
- *ಮಡಿಕೇರಿಯ ಎಸ್ಎಸ್ ಆಸ್ಪತ್ರೆಯಿಂದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ : ಕಲಾಪ್ರತಿಭೆಗೆ ಸಾಕ್ಷಿಯಾದ ವಿದ್ಯಾರ್ಥಿಗಳು*
- *ಮಡಿಕೇರಿಯ ಹಿಂದೂಸ್ತಾನಿ ಶಾಲೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಲ್ಲಿ ದೇಶದ ಭವ್ಯ ಭವಿಷ್ಯ ಕಂಡ ನೆಹರು*
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*