ಸೋಮವಾರಪೇಟೆ NEWS DESK ನ.17 : ಅಪ್ಪು ಅಭಿಮಾನಿಗಳ ಬಳಗದಿಂದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ಪ್ರೇಕ್ಷಾ, ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಆಟೋ ಚಾಲಕ ಮುನೀರ್, 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಾದ ಧೃವ, ಲಿಸ್ಮಾ, ಮೋಹನ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪ್ಪು ಅಭಿಮಾನಿಗಳ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ್, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ವಿನೋದ್‌ಕುಮಾರ್, ಸದಸ್ಯ ಶಿವದಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಜೇಸಿ ಮಾಜಿ ಅಧ್ಯಕ್ಷೆ ಎಂ.ಎ. ರುಬೀನಾ, ಮಾಜಿ ಸೈನಿಕ ಗಣೇಶ್ ಮತ್ತಿತರರು ಇದ್ದರು.










