ಮಡಿಕೇರಿ NEWS DESK ನ.17 : ರಾಷ್ಟ್ರೀಕೃತ ಬ್ಯಾಂಕಿನ ಮಾದರಿಯ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಗ್ರಾಹಕ ಸ್ನೇಹಿ ಸೌಲಭ್ಯಗಳನ್ನು ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಶೀಘ್ರಗತಿಯಲ್ಲಿ ಅಭಿವೃದ್ಧಿಪಡಿಸಿಕೊಳ್ಳಬೇಕೆಂದು ಮೂಡಬಿದಿರೆಯ ಕೆಐಸಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ಯಾಮಲಾ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸಹಕಾರ ನಿಯಮಿತ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡುಗು ಜಿಲ್ಲೆ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಗುಡ್ಡೆ ಹೊಸೂರಿನಲ್ಲಿ ಸಮುದಾಯ ಭವನದಲ್ಲಿ ಜರುಗಿದ ಸಹಕಾರಿ ಉದ್ಯಮಗಳ ಪರಿವರ್ತನಾ ಸಮಾರಂಭದಲ್ಲಿ ಭಾಗವಹಿಸಿದ್ದರು. 2047 ರಲ್ಲಿ ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಸಹಕಾರಿ ಕ್ಷೇತ್ರದ ಪಾಲು ಅತ್ಯಗತ್ಯ ಎಂದು ಅವರು ತಿಳಿಸಿದರು. ಸಮಾರಂಭ ಉದ್ಘಾಟಿಸಿ ಹಾಲು ಉತ್ಪಾದಕ ಕುರಿತು ವಿವರ ನೀಡಿದ ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಮನು ಮುತ್ತಪ್ಪನವರು ಮಾತನಾಡಿ, ದೇಶದಲ್ಲಿ ಸುಮಾರು 8.5 ಲಕ್ಷ ಹಾಲು ಶೇಖರಣ ಕೇಂದ್ರಗಳು 31 ಕೋಟಿಗೊ ಹೆಚ್ಚು ಹಾಲು ಉತ್ಪಾದಕರಿದ್ದು ಹೈನುಗಾರಿಕೆ ಒಂದು ದೊಡ್ಡ ಉದ್ದಿಮೆಯಾಗಿ ಬೆಳೆದಿದೆ , ಆದರೆ ಕರ್ನಾಟಕದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂದು ವಿಷಾದ ವ್ಯಕ್ತಪಡಿಸಿದರು.ಸಮಾರಂಭದ ಅಧ್ಯಕ್ಷತೆ ಯನ್ನು ಗುಡ್ಡೆ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಎಂ.ಸಾಗರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗುಡ್ಡೆ ಹೊಸೂರು ಹಾಲು ಉತ್ಪಾದಕರ ಒಕ್ಕೂಟದ ಎಲ್ಲಾ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನಿಸಲಾಯಿತು. ಸಭೆಯಲ್ಲಿ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಎನ್.ಪಿ. ಸುಲೋಚನ ಹಾಗೂ ನಿರ್ದೇಶಕರುಗಳಾದ ಬಿ.ಎಸ್. ಧನಪಾಲ, ಯತೀಶ್, ಮೋಹನಕುಮಾರ್, ಪಳಂಗಪ್ಪ, ಗುರುಪ್ರಸಾದ್, ಕಾಶಿ, ಶುಭಶೇಖರ, ಅಭಿಷೇಕ್, ಕಮಲ, ಕಮಲಾಕ್ಷಿ, ಬಸಮ್ಮ ಉಪಸ್ಥಿತರಿದ್ದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ನಿರ್ದೇಶಕರಾದ ಎನ್.ಎಂ.ಉಮೇಶ್ ಉತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯುನಿಯನ್.ನಿ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರಾದ ರವಿ ಬಸಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಕಾರ್ಯಕ್ರಮವನ್ನು ಕಾರ್ಯದರ್ಶಿ ನವೀನ್ ಬಿ.ಎಸ್ ಸ್ವಾಗತಿಸಿದರು, ಉಷಾ ಪ್ರಾರ್ಥಿಸಿದರು ಹಾಗೂ ಯೋಗೇಂದ್ರ ನಾಯಕ್ ನಿರೂಪಿಸಿ ವಂದಿಸಿದರು.