ಮಡಿಕೇರಿ ನ.18 NEWS DESK : ರಾಜ್ಯ ಒಲಿಂಪಿಕ್ ಸಂಸ್ಥೆ, ರಾಜ್ಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕರ ತಂಡವು ಇದೇ ಮೊದಲ ಬಾರಿಗೆ ಫೈನಲ್ ಗೆ ಲಗ್ಗೆಯಿಟ್ಟು, ಹೊಸ ಇತಿಹಾಸ ಸೃಷ್ಟಿಸಿದೆ. ಬೆಂಗಳೂರಿನ ರಾಜ್ಯ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಬಾಲಕರ ತಂಡವು ಮೊದಲ ಪಂದ್ಯವನ್ನು 3-1 ಗೋಲುಗಳ ಅಂತರದಿಂದ ಮೈಸೂರು ತಂಡವನ್ನು ಮಣಿಸಿತು. ದ್ವಿತೀಯ ಪಂದ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು 3-1 ಗೋಲುಗಳ ಅಂತರದಿಂದ ಸೋಲಿಸಿತು. ಮೂರನೇ ಪಂದ್ಯದಲ್ಲಿ ದಾವಣಗೆರೆ ಜಿಲ್ಲಾ ತಂಡವನ್ನು 4-1 ಗೋಲುಗಳ ಅಂತರದಿಂದ ಮಣಿಸಿ ಬಾಲಕರ ಎ ಗುಂಪಿನಲ್ಲಿ ಪ್ರಥಮ ಸ್ಥಾನಗಳಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಫೈನಲ್ ಪಂದ್ಯದಲ್ಲಿ ಕೊಡಗು ತಂಡವು ಹಾಸನ ತಂಡವನ್ನು ಎದುರಿಸಲಿದೆ.ಕೊಡಗು ಬಾಲಕರ ತಂಡದ ತರಬೇತುದಾರರಾಗಿ ಮಡಿಕೇರಿಯ ಕ್ರಿಸ್ಟೋಫರ್ ಕಾರ್ಯನಿರ್ವಹಿಸುತ್ತಿದ್ದಾರೆ.