ಮಡಿಕೇರಿ NEWS DESK ನ.18 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರ ಚಿಂತನೆಗಳು ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆಯಾಗಿದೆ ಎಂದರು. ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಬೇಧ, ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿದರು. ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್ ಸಂತ ಕನಕದಾಸರೆಂದು ಶ್ಲಾಘಿಸಿದರು. ಕಾಲೇಜ್ ನ ಸ್ನಾತಕೋತ್ತರ ಅರ್ಥಶಾಸ್ತç ವಿಭಾಗದ ಸಂಚಾಲಕರಾದ ಡಾ.ಹೆಚ್.ಕೆ.ರೇಣುಶ್ರೀ, ಹಿಂದಿ ಉಪನ್ಯಾಸಕಿ ಖುರ್ಷಿದ ಭಾನು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










