ಮಡಿಕೇರಿ ನ.19 NEWS DESK : ನಗರದ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಛದ್ಮವೇಶ, ಸೀಮಂತ ಕಾರ್ಯಕ್ರಮ ಮತ್ತು ಸಮವಸ್ತ್ರ ವಿತರಣಾ ಕಾರ್ಯಕ್ರಮ ನೆರವೇರಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಚೈತ್ರ, ಸಹಾಯಕಿ ಜ್ಯೋತಿ ಸಮುದಾಯದ ಸಹಕಾರ ಪಡೆದು ಸಮವಸ್ತ್ರ ವಿತರಣೆಗೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಇದು ಮಕ್ಕಳಲ್ಲಿ ಸಮಾನತೆ ಮೂಡಿಸಲು ಇದು ಸಹಕಾರವಾಗುತ್ತದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಮತ್ತು ಸಮುದಾಯದ ಸಹಕಾರ ಪಡೆದು ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾರ್ಗದರ್ಶನ ನೀಡಿದರು. ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರಲ್ಲಿ ಅಂಗನವಾಡಿ ಕೇಂದ್ರಕ್ಕಾಗಿ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಯಿತು.
ಛದ್ಮವೇಶದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ, ವಿತರಿಸಲಾಯಿತು. ಪೋಷಣ್ ಅಭಿಯಾನ ಯೋಜನೆಯಡಿ ಮೂರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಮಕ್ಕಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದಲ್ಲಿ ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್‍ರೈ ಅವರು ಸಿಹಿ ಹಂಚಿದರು. ಸದಸ್ಯರಾದ ಯಶ್ವಿನ್, ಪಶು ವೈದ್ಯಾಧಿಕಾರಿ ಶಿಲ್ಪ, ಮುರ್ನಾಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಪಾಲ್ಗೊಂಡಿದ್ದರು. ಜಸ್ಮಿನ್, ಗಣೇಶ್, ಸಿಹಿ ವಿತರಿಸಿದರು. ಕ್ವಾಲಿಟಿ ಫ್ರೂಟ್ಸ್ ಅಂಗಡಿ ಮಾಲೀಕರಾದ ಆಸ್ಕರ್ ತಂಪು ಪಾನೀಯ ವಿತರಿಸಿದರು.