ಸೋಮವಾರಪೇಟೆ NEWS DESK ನ.19 : ಕೊಡಗು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಶಿಕ್ಷಣ ಫೌಂಡೇಶನ್ ಗ್ರಾಮ ಡಿಜಿ ವಿಕಸನ ಸಂಸ್ಥೆ ವತಿಯಿಂದ ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಗ್ರಂಥಾಲಯ ಮೇಲ್ವಿಚಾರಕರಿಗೆ ‘ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ’ ತರಬೇತಿ ಕಾರ್ಯಾಗಾರ ಮಡಿಕೇರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕಾರ್ಯಾಗಾರ ಉದ್ಘಾಟಿಸಿದರು. ಶಿಕ್ಷಣ ಫೌಂಡೇಶನ್ ತರಬೇತುದಾರ ರಕ್ಷಿತ್ ಮಾತನಾಡಿ, ಅರಿವು ಕೇಂದ್ರದ ಗ್ರಂಥಾಲಯದಲ್ಲಿರುವ ಲಾಪ್‌ಟಾಪ್‌ಗಳಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಆ್ಯಪ್ ಗಳನ್ನು ಅಳವಡಿಸಿದ್ದು, 8, 9, 10, 12ನೇ ತರಗತಿಗಳ ಪಠ್ಯ ಹಾಗೂ ಹಿಂದಿನ ಪ್ರಶ್ನೆ ಪತ್ರಿಕೆಗಳು ಸಿಗಲಿದ್ದು, ವಿದ್ಯಾರ್ಥಿಗಳಿಗೆ ಮೇಲ್ವಿಚಾರಕರು ಮನವರಿಗೆ ಮಾಡಿಕೊಡಬೇಕು ಎಂದು ಹೇಳಿದರು. ಡಿಜಿಟಲ್ ಸಾಕ್ಷರತೆ ಮಹಿಳೆಯರ ಬದುಕಿಗೆ ಸಹಕಾರಿಯಾಗಲಿದೆ. ವಾಟ್ಸ್ಆಪ್ ಬಿಸಿನೆಸ್ ಮಾಡಬಹುದು. ಆರ್‌ಡಿಪಿಆರ್ ಸೌಲಭ್ಯಗಳು ಹಾಗು ಡಿಜಿಟಲ್ ಡಿವೈಸ್ ಮೂಲಕ ಹಣದ ವ್ಯವಹಾರದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಪಕಾರ್ಯದರ್ಶಿ ಧನರಾಜು, ಸಹಾಯಕ ಯೋಜನಾಧಿಕಾರಿ ಜೀವನ್‌ಕುಮಾರ್, ಗ್ರಂಥಾಲಯ ಮುಖ್ಯಾಧಿಕಾರಿ ಸುರೇಖಾ ಇದ್ದರು. ಚೇತನ್, ಗಿರಿಜಾ, ಪದ್ಮಾವತಿ, ಸಜಿತಾ ಕಾರ್ಯಕ್ರಮ ನಿರ್ವಹಿಸಿದರು.
Breaking News
- *ಸೋಮವಾರಪೇಟೆ : ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ*
- *ಸೋಮವಾರಪೇಟೆ : ಇಂದಿರಾ ಕ್ಯಾಂಟೀನ್ ಕಾಮಗಾರಿ ಅಪೂರ್ಣ : ಅಸಮಾಧಾನ*
- *ಡಿಜಿಟಲ್ ಸಾಕ್ಷರತೆ ಮಹಿಳೆಯರ ಬದುಕಿಗೆ ಸಹಕಾರಿಯಾಗಲಿದೆ : ಆನಂದ್ ಪ್ರಕಾಶ್ ಮೀನಾ*
- *ಸೋಮವಾರಪೇಟೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ದಿನಾಚರಣೆ*
- *ಸುಂಟಿಕೊಪ್ಪ : ಅಪ್ರಾಪ್ತರಿಗೆ ವಾಹನ ನೀಡಿದರೆ ಪೋಷಕರಿಗೆ ಶಿಕ್ಷೆ*
- *ಮಡಿಕೇರಿ : ನ.22 ರಂದು ಉದ್ಯೋಗ ಮೇಳ*
- *ನ.20 ರಂದು ಶಾಂತಳ್ಳಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿ : ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ : ಸಮವಸ್ತ್ರ ವಿತರಣೆ*
- *ರಾಷ್ಟ್ರೀಯ ಐಕ್ಯತಾ ದಿನ : ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ*
- *ಮಡಿಕೇರಿಯಲ್ಲಿ ವಿಶ್ವ ಪ್ರತಿಜೀವಕ ನಿರೋಧಕ ಜಾಗೃತಿ ಸಪ್ತಾಹ*