
ಸೋಮವಾರಪೇಟೆ ನ.20 NEWS DESK : ಸೋಮವಾರಪೇಟೆ ಪಟ್ಟಣದ ದೇವಾಲಯಗಳಲ್ಲಿ ಮಂಗಳವಾರದಂದು ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಖಾಸಗಿ ಬಸ್ಸು ನಿಲ್ದಾಣದಬಳಿ ಇರುವ ವಿದ್ಯಾಗಣಪತಿ ದೇವಾಲಯದಲ್ಲಿ ನವಿಲುಗರಿಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅರ್ಚಕ ಚಂದ್ರಶೇಖರ ಶಾಸ್ತ್ರಿಗಳ ನೇತೃತ್ವದಲ್ಲಿ ರಾಕೇಶ್ ಶಾಸ್ತ್ರಿ ಹಾಗೂ ರಾಜಣ್ಣ ದೇವರಿಗೆ ಅರ್ಚನೆ,ಅಷ್ಟೋತ್ತರ,ಷೋಡಶೋಪಚಾರ ನಂತರ ಮಹಾಮಂಗಳಾರತಿ ನೆರವೇರಿಸಿದರು. ಬಸವೇಶ್ವರ ದೇವಾಲಯದಲ್ಲಿ ಗಣಪತಿ ಮೂರ್ತಿಯನ್ನು ಶ್ರೀಗಂಧದಿಂದ ಅಲಂಕರಿಸಿ ಅರ್ಚಕ ಶೇಖಯ್ಯ ಶಾಸ್ತ್ರಿಗಳು ವಿಶೇಷ ಪೂಜೆ, ಮಂಗಳಾರತಿ ನಡೆಸಿದರು. ಸೋಮೇಶ್ವರ ದೇವಾಲಯದಲ್ಲಿ ಅರ್ಚಕ ಚಿತ್ರಕುಮಾರ ಭಟ್ಟ್ ಹಾಗೂ ರವಿಶಂಕರ್ ದೇವರಿಗೆ ವಿಶೇಷ ಪೂಜೆಯೊಂದಿಗೆ ಮಹಾಮಂಗಳಾರತಿ ನೆರವೇರಿಸಿದರು, ನಗರದ ವಿವಿಧೆಡೆಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. 








