ಮಡಿಕೇರಿ ನ.20 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ನಾಲ್ವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆಯಿಂದ ಕರ್ನಾಟಕ ಇನ್ಸ್‍ಸಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ನಂದಿನೆರವಂಡ ರವಿ ಬಸಪ್ಪ, ಕಾಯಪಂಡ ಟಾಟ ಚಂಗಪ್ಪ, ಪಾಸುರ ಎನ್.ಉತ್ತಪ್ಪ, ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಮೊಳ್ಳೆರ ಸರಸು ಪೊನ್ನಪ್ಪ ಅವರಿಗೆ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ, ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ಆರ್.ವಿಜಯ್, ಕೆಐಸಿಎಂನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಉಪಾಧ್ಯಕ್ಷರಾದ ಪಟ್ಟಡ ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಪಿ.ಸಿ.ಅಚ್ಚಯ್ಯ, ಪ್ರೇಮ ಸೋಮಯ್ಯ, ಕೋಡಿರ ಎಂ.ತಮ್ಮಯ್ಯ, ವಿ.ಕೆ.ಅಜಯ್ ಕುಮಾರ್, ಪಿ.ಬಿ.ಯತೀಶ್, ಎ.ಎಸ್.ಶ್ಯಾಮ್ ಚಂದ್ರ, ಎನ್.ಎ.ರ‍್ಯಾಲಿ ಮಾದಯ್ಯ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕರಾದ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಇತರರು ಇದ್ದರು.