
ಮಡಿಕೇರಿ ನ.21 NEWS DESK : ಪ್ರಸಕ್ತ (2024-25) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ನ.29 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.









