ದೆಹಲಿ ನ.21 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಮಾಡಿದರು. ಕಳೆದ ಸಾಲಿನಲ್ಲಿ ನಬಾರ್ಡ್ ನೆರವು 5400 ಕೋಟಿ ರೂ ಗಳಷ್ಟಿದ್ದು, ಈ ಬಾರಿ 2400 ಕೋಟಿ ರೂಗಳಿಗೆ ಕಡಿತಗೊಳಿಸಲಾಗಿದೆ. ಈ ಕುರಿತು ನಿರ್ಮಲಾ ಸೀತಾರಾಮನ್ ಅವರ ಗಮನ ಸೆಳೆದು ಈ ವ್ಯತ್ಯಾಸವನ್ನು ಸರಿಪಡಿಸಲು ಕೋರಿದರು.
ಈ ನಿಯೋಗದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಸಚಿವರಾದ ಬೈರತಿ ಸುರೇಶ್, ಚೆಲುವರಾಯಸ್ವಾಮಿ, ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ಶಾಸಕರು ಉಪಸ್ಥಿತರಿದ್ದರು.