ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ ಕ್ರೆಸೆಂಟ್ ಶಾಲೆ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ ಹಾಗೂ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಸಂಯುಕ್ತ ಆಶ್ರಯದಲ್ಲಿ ನ.23 ರಂದು ಮಡಿಕೇರಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ ನಡೆಯಲಿದೆ. ನಗರದ ಮಹದೇವಪೇಟೆಯ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಎಲ್ ಜಿ ಕ್ರೆಸೆಂಟ್ ಶಾಲೆಯ ಅಧ್ಯಕ್ಷ ನಿಜಾಮುದ್ದಿನ್ ಸಿದ್ದೀಖ್ , ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ, ಕೊಡಗು ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್ ಉಪಾಧ್ಯಕ್ಷ ಎಂ.ಬಿ.ನಾಸಿರ್ ಅಹಮದ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರು, ಕೊಡಗು ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್, ಕೊಡಗು ಜಿಲ್ಲಾ ಕ.ಸಾ.ಪ ಗೌರವ ಕೋಶಾಧಿಕಾರಿ, ಎಸ್.ಎಸ್ ಸಂಪತ್ ಕುಮಾರ್, ಮಡಿಕೇರಿ ತಾಲೂಕು ಕ.ಸಾ.ಪ.ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಯುವ ರಸಪ್ರಶ್ನೆ ಕಾರ್ಯಕ್ರಮವನ್ನು ಜಿಲ್ಲೆಯ ಹಿರಿಯ ಸಾಹಿತಿ ಬಿ.ಎ.ಶಂಷುದ್ದೀನ್ ನಡೆಸಿಕೊಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.