ಮಡಿಕೇರಿ ನ.22 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭಿ) ಕ್ಲಿನಿಕ್ , ಸಾಮಾನ್ಯ ವೈದ್ಯ ಶಾಸ್ತ್ರ ವಿಭಾಗ ಹಾಗೂ ಕುಶಾಲನಗರ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆಯನ್ನು ಆಚರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ, ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಮಡಿಕೇರಿ ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಅಪಸ್ಮಾರದ ಪ್ರಯಾಣದಲ್ಲಿ ಮೈಲಿಗಲ್ಲುಗಳು ಎಂಬ 2024ರ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಂಸ್ಥೆಯ ಸಾಮಾನ್ಯ ವೈದ್ಯಕಿಯ ವಿಭಾಗದ ಮುಖ್ಯ ವೈದ್ಯಧಿಕಾರಿ ಡಾ.ಚೇತನ್, ಅಪಾಸ್ಮಾರ ಖಾಯಿಲೆಯ ಬಗ್ಗೆ ಅರಿವು ಮೂಡಿದರು. ಕಾರ್ಯಕ್ರಮಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಆಡಳಿತಧಿಕಾರಿ ರೋಹಿಣಿ, ವೈದ್ಯರಾದ ಡಾ.ಅಜಯ್, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದ ಕೊಡಗು ಜಿಲ್ಲಾ ಸಂಯೋಜಕ ವಿಕ್ರಮ್, ಭೌತಚಿಕಿತ್ಸಕ ಡಾ.ಕ್ರಿಸ್ಟಿ ಜೋಸ್, ಶುಶ್ರೂಷಾ ಅಧಿಕಾರಿ ದೃತಿ ಹಾಜರಿದ್ದರು.